ಮೋದಿ ಉಪನಾಮ ಹೇಳಿಕೆ: ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆ ನೀಡಲು ಗುಜರಾತ್ ಹೈಕೋರ್ಟ್ ನಕಾರ

Prasthutha|

ನವದೆಹಲಿ: ಮೋದಿ ಉಪನಾಮ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆ ನೀಡಲು ಗುಜರಾತ್ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ.

- Advertisement -


2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಶಿಕ್ಷೆಗೆ ತಡೆ ನೀಡುವಂತೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಲ್ಲಿಸಿದ ಮನವಿಯನ್ನು ಗುಜರಾತ್ ಹೈಕೋರ್ಟ್ ಮಂಗಳವಾರ ವಿಚಾರಣೆ ನಡೆಸಿತು. ಜೂನ್ ನಲ್ಲಿ ತೀರ್ಪು ನೀಡುವುದಾಗಿ ನ್ಯಾಯಾಲಯ ಹೇಳಿದೆ.


2019 ರ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿದ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಈ ದೋಷಾರೋಪಣೆಯ ನಂತರ, ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು.