ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು, ನವೆಂಬರ್ 12ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.
ಡಿಸೆಂಬರ್ 8ರಂದು ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹಿಮಾಚಲ ಪ್ರದೇಶದ ಅವಧಿಯು ಜನವರಿ 8ರಂದು ಕೊನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಇತ್ತೀಚೆಗೆ ಚುನಾವಣಾ ಸಿದ್ಧತೆಯನ್ನು ಪರಿಶೀಲನೆ ನಡೆಸಲು ಎರಡೂ ರಾಜ್ಯಗಳಿಗೆ ಭೇಟಿ ನೀಡಿದ್ದರು.
68 ಸ್ಥಾನಗಳ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಬಹುಮತಕ್ಕೆ 35 ಸ್ಥಾನ ಅಗತ್ಯವಿದೆ.
2017ರ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 44, ಕಾಂಗ್ರೆಸ್ 21 ಸ್ಥಾನಗಳನ್ನು ಪಡೆದಿತ್ತು.