Home ಟಾಪ್ ಸುದ್ದಿಗಳು ಗುಜರಾತ್: ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, ಆರು ಮಂದಿ ಕಾರ್ಮಿಕರು ಬಲಿ

ಗುಜರಾತ್: ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, ಆರು ಮಂದಿ ಕಾರ್ಮಿಕರು ಬಲಿ

ಗುಜರಾತ್: ಸೋಮವಾರ ಮುಂಜಾನೆ ನಡೆದ ರಾಸಾಯನಿಕ ಕಾರ್ಖಾನೆಯಲ್ಲಿ ನಡೆದ ಸ್ಫೋಟದಲ್ಲಿ ಆರು ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಗುಜರಾತಿನ ಭರೂಚ್ ಜಿಲ್ಲೆಯ ದಹೇಜ್ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಸ್ಥಳದಲ್ಲಿದ್ದ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ದ್ರಾವಕ ಬಟ್ಟಿ ಇಳಿಸುವ ಪ್ರಕ್ರಿಯೆಯ ವೇಳೆ ಇದ್ದಕ್ಕಿದ್ದಂತೆ ಸ್ಫೋಟಗೊಂಡ ಪರಿಣಾಮ, ರಿಯಾಕ್ಟರ್ ಬಳಿ ಕೆಲಸ ನಿರ್ವಹಿಸುತ್ತಿದ್ದ ಆರು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಭರೂಚ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ತಿಳಿಸಿದ್ದಾರೆ.


ರಿಯಾಕ್ಟರ್ ನಲ್ಲಿ ಸಂಭವಿಸಿದ ಸ್ಫೋಟದ ಪರಿಣಾಮ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದ ಎಲ್ಲಾ ಆರು ಜನರು ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp
Exit mobile version