ಗುಜರಾತ್‌ ಚುನಾವಣೆ: ನಾಳೆ ಎರಡನೇ ಹಂತದ ಮತದಾನ

Prasthutha|

ಅಹಮದಾಬಾದ್‌: ಗುಜರಾತ್ ವಿಧಾನಸಭೆಗೆ ನಾಳೆ ಎರಡನೇ ಹಂತದ ಮತದಾನ ನಡೆಯಲಿದ್ದು, 14 ಜಿಲ್ಲೆಗಳ 93 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

2017ರ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಈ ಕ್ಷೇತ್ರಗಳಲ್ಲಿ 51 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್‌ 39 ಹಾಗೂ ಇತರರು 3 ಸ್ಥಾನ ಪಡೆದುಕೊಂಡಿದ್ದರು. ಕೇಂದ್ರ ಗುಜರಾತ್‌ನಲ್ಲಿ ಬಿಜೆಪಿ 37 ಸ್ಥಾನ ಪಡೆದಿದ್ದರೆ, ಕಾಂಗ್ರೆಸ್‌ 22 ಕ್ಷೇತ್ರಗಳಲ್ಲಿ ವಿಜಯಶಾಲಿಯಾಗಿತ್ತು. ಉತ್ತರ ಗುಜರಾತ್‌ನಲ್ಲಿ ಕಾಂಗ್ರೆಸ್‌ 17, ಬಿಜೆಪಿ 14 ಸ್ಥಾನ ಪಡೆದುಕೊಂಡಿದ್ದವು.

- Advertisement -

2ನೇ ಹಂತದ ಮತದಾನದಲ್ಲಿ 2.51 ಕೋಟಿ ಜನರಿಗೆ ಮತದಾನ ಮಾಡುವ ಅರ್ಹತೆಯನ್ನು ಪಡೆದಿದ್ದಾರೆ. ಅದರಲ್ಲಿ 1.29 ಕೋಟಿ ಪುರುಷರು ಮತ್ತು 1.22 ಕೋಟಿ ಮಹಿಳಾ ಮತದಾರರು. 14,975 ಮತದಾನ ಕೇಂದ್ರಗಳಲ್ಲಿ ಮತದಾನ ನಡೆಯಲಿದೆ.

- Advertisement -