ಗುಜರಾತ್ | ಅರವಿಂದ್ ಕೇಜ್ರಿವಾಲ್ ಮೇಲೆ ಬಾಟಲಿ ಎಸೆತ

Prasthutha|

- Advertisement -

ರಾಜಕೋಟ್: ಗರ್ಬಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮೇಲೆ ಪ್ಲಾಸ್ಟಿಕ್ ಬಾಟಲಿಗಳನ್ನು ಎಸೆದ ಘಟನೆ ಗುಜರಾತ್ ನ ರಾಜಕೋಟ್ ನಲ್ಲಿ ನಡೆದಿದೆ.

ಆದರೆ ಬಾಟಲಿ ಅವರ ತಲೆಯ ಮೇಲೆ ಹಾದುಹೋಯಿತು ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಸ್ಪಷ್ಟನೆ ನೀಡಿದ್ದಾರೆ.

- Advertisement -

ಶನಿವಾರ ರಾತ್ರಿ ಖೋಡಲ್ಧಾಮ್ ದೇವಸ್ಥಾನದಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿಯಾದ ಕೇಜ್ರಿವಾಲ್ ಅವರು ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದದಲ್ಲಿ ನಿರತರಾಗಿದ್ದರು. ಆ ಸಂದರ್ಭದಲ್ಲಿ ಕೇಜ್ರಿವಾಲ್ ಮೇಲೆ ಯಾರೋ ಬಾಟಲಿಯನ್ನು ಎಸೆದಿದ್ದಾರೆ. ಆದರೆ ಅವರಿಗೆ ಆ ಬಾಟಲಿ ತಾಗಲಿಲ್ಲ. 

ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Join Whatsapp