ಗುಜರಾತ್‌: ಹಳೆಯ ಸೇತುವೆ ಕುಸಿದು 10 ಮಂದಿ ಜಲಸಮಾಧಿ

Prasthutha|

- Advertisement -

ಗುಜರಾತ್‌: ಹಳೆಯ ಸೇತುವೆ ಕುಸಿದು ಬಿದ್ದ ಪರಿಣಾಮ ಅನೇಕ ವಾಹನಗಳು ನದಿಗೆ ಧುಮುಕಿದ ಘಟನೆ ಸುರೇಂದ್ರನಗರ ಜಿಲ್ಲೆಯ ವಸ್ತಾಡಿ ಪ್ರದೇಶದಲ್ಲಿ ಭಾನುವಾರ ನಡೆದಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಘಟನೆಯಲ್ಲಿ ಕನಿಷ್ಠ 10 ಜನರು ಕೊಚ್ಚಿ ಹೋಗಿದ್ದಾರೆ ಮತ್ತು ನಾಲ್ವರನ್ನು ರಕ್ಷಿಸಲಾಗಿದೆ. ಉಳಿದ ಆರು ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎನ್ನಲಾಗುತ್ತಿದೆ.

- Advertisement -

ಪೊಲೀಸರು ಮತ್ತು ಸರ್ಕಾರಿ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಿಸಿದ ಜನರನ್ನು ಹತ್ತಿರದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.