ನವದೆಹಲಿ: ಸೋನಿಯಾ ಗಾಂಧಿ ಅವರ ಮೇಲೆ ನಮಗೆ ಸಂಪೂರ್ಣ ನಂಬಿಕೆಯಿದೆ. ಮಾತ್ರವಲ್ಲ ಅವರ ನಾಯಕತ್ವವನ್ನು ಯಾರೂ ಪ್ರಶ್ನಿಸಿಲ್ಲ ಎಂದು ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಹಿರಿಯ ನಾಯಕ ಗುಲಾಂ ನಬಿ ಆಝಾದ್ ತಿಳಿಸಿದರು.
ಪ್ರಸಕ್ತ ಇಂದು ಕಾಂಗ್ರೆಸ್ ಆಂತರಿಕ ಕಾರ್ಯಕಾರಿಣಿ ಸಭೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಮುಂದಿನ ಚುನಾವಣೆಯ ವರೆಗೆ ನಾನು ಪೂರ್ಣಾವಧಿ ಮತ್ತು ಅಧಿಕೃತ ಅಧ್ಯಕ್ಷೆ ಎಂದು ತಿಳಿಸುವ ಮೂಲಕ ಪಕ್ಷದೊಳಗೆ ಬಂಡಾಯ ಮತ್ತು ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.
ಪಕ್ಷದ ಆಂತರಿಕ ಚುನಾವಣೆಯು ಮುಂದಿನ ವರ್ಷ ಸೆಪ್ಟೆಂಬರ್ ನಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಮೂಲಗಳು ಸ್ಪಷ್ಟಪಡಿಸಿವೆ.