ಚಿಕ್ಕಬಳ್ಳಾಪುರ ಜಿಲಿಟಿನ್ ಸ್ಪೋಟದ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

Prasthutha|

- Advertisement -

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗೇವಲ್ಲಿಯ ಕಲ್ಲು ಗಣಿಗಾರಿಕೆಯಲ್ಲಿ ಸಂಭವಿಸಿದ ಜಿಲಿಟಿನ್ ಸ್ಪೋಟದಲ್ಲಿ ಆರು ಜನ ಮೃತಪಟ್ಟಿದ್ದಾರೆ. ಈ ಹಿಂದೆ ಶಿವಮೊಗ್ಗದಲ್ಲೂ ಇಂತಹದೇ ದೊಡ್ಡ ದುರಂತ ಸಂಭವಿಸಿದ್ದರೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಇದೀಗ ಸಾರ್ವಜನಿಕರಿಂದ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಹಿರೇನಾಗೇವಲ್ಲಿಯಲ್ಲಿ ಸಂಭವಿಸಿದ ದುರಂತದಲ್ಲಿ ಸತ್ತವರು ಜಿಲಿಟಿನ್ ಸ್ಪೋಟದಿಂದಲ್ಲ ಬದಲಾಗಿ ರಾಜ್ಯ ಸರ್ಕಾರದ ಬೇಜವಾಬ್ದಾರಿಯಿಂದ ಈ ಭೀಕರ ದುರಂತ ಸಂಭವಿಸಿದೆ ಎಂದು ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರು‌ಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ. ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಅವರ ದುರಾಡಳಿತಕ್ಕೆ ಅಮಾಯಕ ಕಾರ್ಮಿಕರು ಬಲಿಯಾಗಿದ್ದಾರೆ ಎಂದಿದ್ದಾರೆ.

- Advertisement -

ಶಿವಮೊಗ್ಗದ ಜಿಲೆಟಿನ್ ಸ್ಪೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಪೋಟವು ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಶಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿಯಾಗಿದೆ.

ಮುಖ್ಯಮಂತ್ರಿಯವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ? ಎಂದು ಪ್ರಶ್ನಿಸಿರುವ ಅವರು ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಆಘಾತಕಾರಿ ದುರ್ಘಟನೆ.

ಮೃತರ ಆತ್ಮಕ್ಕೆ ನಾನು ಶಾಂತಿ ಕೋರುವೆ. ಪ್ರಕರಣದ ತನಿಖೆ ನಡೆಸಿ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ತಲಾ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

Join Whatsapp