ಉತ್ತರ ಪ್ರದೇಶದಲ್ಲಿ AIMIM ಮುಖ್ಯಸ್ಥ ಅಸದುದ್ದೀನ್ ಉವೈಸಿ ಕಾರಿನ ಮೇಲೆ ಗುಂಡಿನ ದಾಳಿ!

Prasthutha|

ಲಕ್ನೋ: ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ಅವರು ಉತ್ತರ ಪ್ರದೇಶದ ದಸ್ನಾ ಪ್ರದೇಶದಲ್ಲಿ ಹಾದು ಹೋಗುತ್ತಿದ್ದಾಗ ಅವರ ಕಾರಿನ ಮೇಲೆ ಅಪರಿಚಿತ ದುಷ್ಕರ್ಮಿಗಳು ಐದು ಸುತ್ತು ಗುಂಡು ಹಾರಿಸಿದ್ದಾರೆ.

- Advertisement -

ಘಟನೆಯಲ್ಲಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಮೀರತ್ ನಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಭಾಗವಹಿಸಿದ ಬಳಿಕ ಅಸದುದ್ದೀನ್ ಉವೈಸಿ ಅವರು ತನ್ನ ಅನುಯಾಯಿಗಳೊಂದಿಗೆ ಬೆಂಗಾವಲು ಮೂಲಕ ತೆರಳುತ್ತಿದ್ದ ವೇಳೆ ಛಜರಾಸಿ ಟೋಲ್ ಪ್ಲಾಝದಲ್ಲಿ ಈ ದಾಳಿ ನಡೆದಿದೆ.

ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Join Whatsapp