Home ಟಾಪ್ ಸುದ್ದಿಗಳು ಉತ್ತರ ಪ್ರದೇಶದಲ್ಲಿ AIMIM ಮುಖ್ಯಸ್ಥ ಅಸದುದ್ದೀನ್ ಉವೈಸಿ ಕಾರಿನ ಮೇಲೆ ಗುಂಡಿನ ದಾಳಿ!

ಉತ್ತರ ಪ್ರದೇಶದಲ್ಲಿ AIMIM ಮುಖ್ಯಸ್ಥ ಅಸದುದ್ದೀನ್ ಉವೈಸಿ ಕಾರಿನ ಮೇಲೆ ಗುಂಡಿನ ದಾಳಿ!

ಲಕ್ನೋ: ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ಅವರು ಉತ್ತರ ಪ್ರದೇಶದ ದಸ್ನಾ ಪ್ರದೇಶದಲ್ಲಿ ಹಾದು ಹೋಗುತ್ತಿದ್ದಾಗ ಅವರ ಕಾರಿನ ಮೇಲೆ ಅಪರಿಚಿತ ದುಷ್ಕರ್ಮಿಗಳು ಐದು ಸುತ್ತು ಗುಂಡು ಹಾರಿಸಿದ್ದಾರೆ.

ಘಟನೆಯಲ್ಲಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಮೀರತ್ ನಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಭಾಗವಹಿಸಿದ ಬಳಿಕ ಅಸದುದ್ದೀನ್ ಉವೈಸಿ ಅವರು ತನ್ನ ಅನುಯಾಯಿಗಳೊಂದಿಗೆ ಬೆಂಗಾವಲು ಮೂಲಕ ತೆರಳುತ್ತಿದ್ದ ವೇಳೆ ಛಜರಾಸಿ ಟೋಲ್ ಪ್ಲಾಝದಲ್ಲಿ ಈ ದಾಳಿ ನಡೆದಿದೆ.

ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Join Whatsapp
Exit mobile version