Home ಟಾಪ್ ಸುದ್ದಿಗಳು ಕೊಡಗು: ನಿರ್ಜನ ಪ್ರದೇಶದಲ್ಲಿ ಬಜರಂಗದಳದ ಕಾರ್ಯಕರ್ತರಿಗೆ ಬಂದೂಕು ತರಬೇತಿ !

ಕೊಡಗು: ನಿರ್ಜನ ಪ್ರದೇಶದಲ್ಲಿ ಬಜರಂಗದಳದ ಕಾರ್ಯಕರ್ತರಿಗೆ ಬಂದೂಕು ತರಬೇತಿ !

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸಂಘಪರಿವಾರ ಶಸ್ತ್ರಾಸ್ತ್ರಗಳನ್ನು ಬಹಿರಂಗವಾಗಿ ವಿತರಿಸಿದ ಬಳಿಕ ಇದೀಗ ಬಜರಂಗ ದಳದ ಕಾರ್ಯಕರ್ತರಿಗೆ ಬಂದೂಕು ತರಬೇತಿಗೆ ನೀಡಿದ ಘಟನೆ ಬೆಳಕಿಗೆ ಬಂದಿದೆ.

ಶೌರ್ಯ ಪ್ರಶಿಕ್ಷಣ ಹೆಸರಿನಲ್ಲಿ ಹಿಂದುತ್ವ ಕಾರ್ಯಕರ್ತರಿಗೆ ಭಯೋತ್ಪಾದನ ತರಬೇತಿ ನೀಡಿದ ಸಂಘಪರಿವಾರ ನಾಯಕರ ವಿರುದ್ಧ ಭಯೋತ್ಪಾದನಾ ಕೃತ್ಯಕ್ಕೆ ಸಂಚು ಪ್ರಕರಣ ದಾಖಲಿಸಿ. ಜಿಲ್ಲೆಯಲ್ಲಿ ನಡೆಯಬಹುದಾದ ಸಂಭಾವ್ಯ ಭಯೋತ್ಪಾದನಾ ಕೃತ್ಯವನ್ನು ತಪ್ಪಿಸಬೇಕು ಎಂದು ಎಸ್ ಡಿಪಿಐ ಜಿಲ್ಲಾ ಸಮಿತಿ ಸದಸ್ಯ ಅಮೀನ್ ಮೊಹ್ಸಿನ್ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಈ ಟ್ವೀಟನ್ನು ಕೊಡಗು ಪೊಲೀಸ್ ವರಿಷ್ಠಾಧಿಕಾರಿ, ಕರ್ನಾಟಕ ಡಿಜಿಪಿ, ಮುಖ್ಯಮಂತ್ರಿ ಬೊಮ್ಮಾಯಿ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್ ಅವರಿಗೆ ಟ್ಯಾಗ್ ಮಾಡಿದ್ದಾರೆ.

ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಅವರು ಟ್ವೀಟ್ ಮಾಡಿ, ಖಾಸಗಿ ಸಂಸ್ಥೆಗಳು ಶಸ್ತ್ರಾಸ್ತ್ರ ತರಬೇತಿ ನೀಡುವುದು ಕಾನೂನುಬಾಹಿರ, ಗೋಸಂರಕ್ಷಣೆಯ ಹೆಸರಿನಲ್ಲಿ ಮುಸ್ಲಿಮರು ಮತ್ತು ಕೆಳಜಾತಿ ಹಿಂದೂಗಳ ವಿರುದ್ಧ ದ್ವೇಷವನ್ನು ಹರಡುತ್ತಿರುವ ಬಜರಂಗ ದಳಕ್ಕೆ ಕೊಡಗಿನಲ್ಲಿ ಶಸ್ತ್ರಾಸ್ತ್ರ ತರಬೇತಿಗೆ ಅನುಮತಿ ಕೊಟ್ಟವರು ಯಾರು? ಸಂಘಟಕರ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಲಿ ಎಂದು ಒತ್ತಾಯಿಸಿದ್ದಾರೆ.


ಮಂಗಳೂರಿನಲ್ಲಿ ಕಾರ್ಯಕರ್ತರಿಗೆ ಬಹಿರಂಗವಾಗಿ ತ್ರಿಶೂಲ ವಿತರಿಸಿ ವಿವಾದ ಸೃಷ್ಟಿಸಿದ್ದ ವಿಶ್ವ ಹಿಂದೂ ಪರಿಷತ್- ಬಜರಂಗದಳ ಕೊಡಗಿನಲ್ಲಿಯೂ ತನ್ನ ಕಾರ್ಯಕರ್ತರಿಗೆ ಬಹಿರಂಗವಾಗಿ ಶಸ್ತ್ರಾಸ್ತ್ರ ವಿತರಣೆ ನಡೆಸಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಕೊಡಗಿನ ಪೊನ್ನಂಪೇಟೆಯಲ್ಲಿ ನಡೆದ ಬಜರಂಗದಳ ಶೌರ್ಯ ಪ್ರಶಿಕ್ಷಣ ವರ್ಗ ಕಾರ್ಯಕ್ರಮವೊಂದರಲ್ಲಿ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ವಿತರಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಈ ಕುರಿತು ಸ್ವತಹ ಫೇಸ್ಬುಕ್ ನಲ್ಲಿ ಫೋಟೋ ಹಂಚಿರುವ ಬಜರಂಗದಳದ ಕಾರ್ಯಕರ್ತ ಅರುನ್ ತೇಜ್ ಎಂಬಾತ, ನಾಯಕರೊಬ್ಬರು ಆತನಿಗೆ ಚಾಕೊಂದನ್ನು ನೀಡುತ್ತಿರುವ ಫೋಟೋವನ್ನು ಅಪ್ಲೋಡ್ ಮಾಡಿದ್ದಾನೆ. ಬಜರಂಗದಳದ ಕಾರ್ಯಕರ್ತರು ನಿರ್ಜನ ಪ್ರದೇಶವೊಂದರಲ್ಲಿ ಬಂದೂಕು ಹಿಡಿದು ಗುರಿ ಇಡುತ್ತಿರುವ ಫೋಟೋ ಕೂಡ ವೈರಲ್ ಆಗಿದೆ.

Join Whatsapp
Exit mobile version