ಗುಂಡ್ಯ: ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್ ಲಾರಿ..!

Prasthutha|

ಗುಂಡ್ಯ: ಕಂಟೇನರ್ ಲಾರಿಯೊಂದು ಕಾರಿನ ಮೇಲೆಯೇ ಮಗುಚಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಬಳಿ ನಡೆದಿದೆ.

- Advertisement -

ಗುಂಡ್ಯದ ಸಮೀಪ ಬರ್ಚಿನಹಳ್ಳ ಎಂಬಲ್ಲಿ ಈ ಘಟನೆ ನಡೆದಿದೆ. ಸಿಫ್ಟ್ ಕಾರ್ ಮೇಲೆ ಕಂಟೇನರ್ ಮಗುಚಿ ಬಿದ್ದಿದ್ದು, ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ.


ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ವಾಂತಿ ಬಂತೆಂದು ಕಾರು ರಸ್ತೆ ಬದಿ ನಿಲ್ಲಿಸಿ ತೆರಳಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.

- Advertisement -

ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.



Join Whatsapp