ಗುಂಡೇಟಿನಿಂದ ಮೇಲ್ಬಾಗದ ಕಿವಿ ಗಾಯಗೊಂಡಿದೆ: ಡೊನಾಲ್ಡ್ ಟ್ರಂಪ್

Prasthutha|

- Advertisement -

​ ಟ್ರಂಪ್​ ಮೇಲೆ ದಾಳಿ, ಪ್ರಧಾನಿ ಮೋದಿ ಖಂಡನೆ

ವಾಷಿಂಗ್ಟನ್: ಗುಂಡಿನ ದಾಳಿಯಿಂದ ನನ್ನ ಮೇಲ್ಬಾಗದ ಕಿವಿ ಗಾಯಗೊಂಡಿದೆ.
ನಮ್ಮ ದೇಶದಲ್ಲಿ ಇಂತಹ ಕೃತ್ಯ ನಡೆದಿರುವುದನ್ನು ನಂಬಲಾಗುತ್ತಿಲ್ಲ. ಘಟನೆ ಬಳಿಕ ಅಮೆರಿಕಾ ಸೀಕ್ರೆಟ್ ಸರ್ವಿಸ್ ಹಾಗೂ ಕಾನೂನು ವ್ಯವಸ್ಥೆ ಕೈಗೊಂಡ ತ್ವರಿತ ಕ್ರಮಕ್ಕೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆಂದು ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

- Advertisement -

ಘಟನೆ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್ ಅವರು, ಗುಂಡಿನ ದಾಳಿಯಿಂದ ನನ್ನ ಮೇಲ್ಬಾಗದ ಕಿವಿ ಗಾಯಗೊಂಡಿದೆ. ಘಟನೆ ವೇಳೆ ಕೇಳಿ ಬಂದ ಗುಂಡಿನ ಸದ್ದು ಏನೇ ನಡೆಯುತ್ತಿದೆ ಎಂಬ ಸಂದೇಶವನ್ನ ನೀಡಿತ್ತು. ಕೂಡಲೇ ಕಿವಿಯಿಂದ ರಕ್ತಸ್ರಾವವಾಗುತ್ತಿರುವುದು ತಿಳಿಯಿತು. ಘಟನೆಯಲ್ಲಿ ಗಾಯಗೊಂಡವರು ಶೀಘ್ರಗತಿಯಲ್ಲಿ ಗುಣಮುಖರಾಗಲಿ. ಮೃತಪಟ್ಟವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆಂದು ಹೇಳಿದ್ದಾರೆ.

ಮತ್ತೊಂದು ಪೋಸ್ಟ್ ನಲ್ಲಿ ನಮ್ಮ ದೇಶದಲ್ಲಿ ಇಂತಹ ಕೃತ್ಯ ನಡೆದಿರುವುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಶೂಟರ್ ಹತ್ಯೆಯಾಗಿರುವ ಬಗ್ಗೆ ಏನೂ ತಿಳಿದಿಲ್ಲ. ಘಟನೆ ವೇಳೆ ಯುನೈಟೆಡ್ ಸ್ಟೇಟ್ಸ್ ಸೀಕ್ರೆಟ್ ಸರ್ವೀಸ್ ಮತ್ತು ಕಾನೂನು ಜಾರಿ ಸಂಸ್ಥೆಗಳು ಕೈಗೊಂಡ ತ್ವರಿತ ಕ್ರಮಕ್ಕೆ ಧನ್ಯವಾದ ಹೇಳಲು ಬಯಸುತ್ತೇನೆಂದು ತಿಳಿಸಿದ್ದಾರೆ.

ಸ್ನೇಹಿತ ಡೊನಾಲ್ಡ್​ ಟ್ರಂಪ್​ ಮೇಲೆ ದಾಳಿ, ಪ್ರಧಾನಿ ಮೋದಿ ಖಂಡನೆ

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರ್‍ಯಾಲಿ ಮೇಲೆ ನಡೆದ ಗುಂಡಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ತನ್ನ ಸ್ನೇಹಿತನ ಮೇಲೆ ನಡೆದಿರುವ ಹಲ್ಲೆಯಿಂದ ಬೇಸರಗೊಂಡಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ. ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಅವಕಾಶವಿಲ್ಲ, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ ಎಂದು ತಮ್ಮ ಎಕ್ಸ್​ ಪೋಸ್ಟ್​ನಲ್ಲಿ ಬರೆದಿದ್ದಾರೆ.



Join Whatsapp