ಈಶ್ವರಪ್ಪಗೆ ಗೂಳಿಹಟ್ಟಿ ಶೇಖರ್‌ ಬೆಂಬಲ ಘೋಷಣೆ

Prasthutha|

ಶಿವನೊಗ್ಗ: ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿರುವ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪಗೆ ಮಾಜಿ ಸಚಿವ ಹಾಗೂ ಭೋವಿ ಸಮಾಜದ ಮುಖಂಡ ಗೂಳಿಹಟ್ಟಿ ಶೇಖರ್‌ ಬೆಂಬಲ ಘೋಷಿಸಿದ್ದಾರೆ.

- Advertisement -

ಬುಧವಾರ ಈಶ್ವರಪ್ಪ ಈಶ್ವರಪ್ಪ ಮನೆಗೆ ತೆರಳಿದ ಶೇಖರ್, ನಿಮ್ಮ ನಿರ್ಧಾರಕ್ಕೆ ನನ್ನ ಬೆಂಬಲ ಇದೆ. ಚುನಾವಣೆ ಮುಗಿಯುವವರೆಗೆ ಕ್ಷೇತ್ರದಲ್ಲೇ ಇರುತ್ತೇನೆ. ನಿಮ್ಮ ಪರ ಪ್ರಚಾರ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಗೂಳಿಹಟ್ಟಿ ಶೇಖರ್, ಹಿಂದೂ ಹುಲಿ ಈಶ್ವರಪ್ಪ ಅವರನ್ನು ಬೆಂಬಲಿಸುತ್ತೇನೆ. ಪಕ್ಷ ಶುದ್ಧೀಕರಣದ ಬಗ್ಗೆ ಅವರು ಧ್ವನಿ ಎತ್ತಿದ್ದಾರೆ. ಬಿಜೆಪಿ ಒಂದು ಕುಟುಂಬಕ್ಕೆ ಸೀಮಿತವಾಗಿದೆ. ಇಂತಹ ಸಂದರ್ಭದಲ್ಲಿ ಅವರಿಗೆ ಬೆಂಬಲ ನೀಡುವುದು ನನ್ನ ಕರ್ತವ್ಯವಾಗಿದೆ ಎಂದಿದ್ದಾರೆ.



Join Whatsapp