ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆ

Prasthutha|

ಹುಬ್ಬಳ್ಳಿ: ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಅವರನ್ನು ಹಾಡಹಗಲೇ ಕೊಲೆ ಮಾಡಿರುವ ದುರ್ಘಟನೆ ಇಂದು ನಗರದ ಹೋಟೆಲ್ ಒಂದರಲ್ಲಿ ನಡೆದಿದೆ.

- Advertisement -

ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದ ಚಂದ್ರಶೇಖರ್ ಗುರೂಜಿ ಅವರನ್ನು ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಖಾಸಗಿ ಹೋಟೆಲ್ ನ ರಿಸೆಪ್ಷನ್ ಬಳಿಯೇ ಅವರಿಗೆ ಚಾಕುವಿನಿಂದ ಇರಿದಿದ್ದಾರೆ. ಚಾಕು ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡ ಚಂದ್ರಶೇಖರ್ ಗುರೂಜಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದುರಾದರೂ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಹುಬ್ಬಳ್ಳಿ ಧಾರವಾಡ ಕಮೀಷನರ್ ಲಾಬೂರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಹೊಟೇಲ್ ಹಾಗೂ‌ ಮೃತದೇಹ ವಿರುವ ಬಳಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

- Advertisement -

ಚಂದ್ರಶೇಖರ್ ಗುರೂಜಿ ಅವರ ಮೃತದೇಹವನ್ನು ಕಿಮ್ಸ್ ಗೆ ರವಾನೆ ಮಾಡಲಾಗಿದೆ. ಸರಳವಾಸ್ತು, ವಾಸ್ತು ಪರಿಹಾರದ ಸಲಹೆ ಮೂಲಕ ಚಂದ್ರಶೇಖರ್ ಗುರೂಜಿ ಖ್ಯಾತರಾಗಿದ್ದು ಚಾನಲ್ ಕೂಡ ನಡೆಸುತ್ತಿದ್ದರು.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಡಾ. ಚಂದ್ರಶೇಖರ್ ಗುರೂಜಿಯ ಮೃತದೇಹವನ್ನು ರವಾನಿಸಲಾಗಿದ್ದು, ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.  

Join Whatsapp
Exit mobile version