ಧಾರವಾಡ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ(96) ಅವರು ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.
ನಾಡಿನ ಹೆಸರಾಂತ ಸಾಹಿತಿಯಾಗಿದ್ದ ಗುರುಲಿಂಗ ಕಾಪಸೆ ಅವರ ಮೂಲ ಊರು ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲೋಣಿ ಬಿಕೆ ಗ್ರಾಮ. ಸದ್ಯ ಧಾರವಾಡದ ಸಪ್ತಾಪುರ ದುರ್ಗಾ ಕಾಲೋನಿಯಲ್ಲಿ ನೆಲೆಸಿದ್ದರು. ಕನ್ನಡ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದರು.
ಮಕ್ಕಳ ಸಾಹಿತ್ಯದಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದ ಕಾಪಸೆ ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮಧುರ ಚೆನ್ನರ ಜೀವನ ಹಾಗೂ ಕೃತಿಗಳ ಕುರಿತ ಮಹಾಪ್ರಬಂಧ ರಚಿಸಿದ್ದರು.