ಸಿಎಂ ಮಾಧ್ಯಮ ಸಂಯೋಜಕರಾಗಿ ಗುರುಲಿಂಗಸ್ವಾಮಿ ನೇಮಕ

Prasthutha|

ಬೆಂಗಳೂರು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಎಚ್.ಬಿ. ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

- Advertisement -


ಆಗಸ್ಟ್ 2ರಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಯವರ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಗುತ್ತಿಗೆ ಆಧಾರದ ಮೇಲೆ ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕನ್ನಾಗಿ ಗುರುಲಿಂಗಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.


ಗುರುಲಿಂಗಸ್ವಾಮಿ ಅವರು ವಿಜಯವಾಣಿ ಸೇರಿದಂತೆ ಹಲವು ಪತ್ರಿಕೆಗಳು, ಟಿವಿ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

Join Whatsapp