ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಅಮಿತ್ ಶಾ ಹೆಚ್‌ ಡಿಕೆಗೆ ಸುಪಾರಿ ಕೊಟ್ಟಿದ್ದಾರೆ: ಲಕ್ಷ್ಮಣ್

Prasthutha|

- Advertisement -

ಚಿಕ್ಕಮಗಳೂರು: ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ಟಾಸ್ಕ್ ಕೊಟ್ಟಿದ್ದು, ಅವರು ಅದನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಲಕ್ಷ್ಮಣ್ ಹೆಚ್‌ಡಿಕೆ ವಿರುದ್ಧ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಸುಪಾರಿ ಕೊಟ್ಟಿದ್ದಾರೆ. ಬೆಳಗ್ಗೆ ಎದ್ದರೆ ಪ್ರೆಸ್‌ ಮೀಟ್ ಮಾಡಬೇಕು. ಸಂಜೆ ಪ್ರೆಸ್‌ ಮೀಟ್ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬೈಯ್ಯಬೇಕು. ಇದೇ ಅವರು ಕೊಟ್ಟಿರುವ ಸುಪಾರಿ. ಕುಮಾರಸ್ವಾಮಿಯವರ ಕೆಲಸವೂ ಅಷ್ಟೇ. ಆ ಕೆಲಸವನ್ನು ಹೆಚ್‌ಡಿ ಕುಮಾರಸ್ವಾಮಿಯವರು ಅಚ್ಚುಕಟ್ಟಾಗಿ ಮಾಡುತ್ತಿದ್ದಾರೆ ಎಂದರು.

Join Whatsapp