ಮೃತ ರೈತ ಶುಭಕರನ್‌ ಕುಟುಂಬಕ್ಕೆ 1 ಕೋಟಿ ರೂ., ಸರ್ಕಾರಿ ಉದ್ಯೋಗ: ಪಂಜಾಬ್‌ ಸಿಎಂ ಘೋಷಣೆ

Prasthutha|

- Advertisement -

ಚಂಡೀಗಢ: ರೈತರ ಪ್ರತಿಭಟನೆಯ ವೇಳೆ ಮೃತಪಟ್ಟ ಶುಭಕರನ್ ಸಿಂಗ್ ಕುಟುಂಬಕ್ಕೆ 1 ಕೋಟಿ ಆರ್ಥಿಕ ನೆರವು ಮತ್ತು ಕಿರಿಯ ಸಹೋದರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಘೋಷಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿಗಳು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಜೊತೆಗೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ಕೂಡ ನೀಡಿದ್ದಾರೆ.

- Advertisement -

ಕನಿಷ್ಠ ಬೆಂಬಲ ಬೆಲೆ (MSP ) ಗಾಗಿ ಕೇಂದ್ರದ ಪ್ರಸ್ತಾವನೆಗಳನ್ನು ಒಪ್ಪದ ಪ್ರತಿಭಟನಾಕಾರರು ತಮ್ಮ ‘ದೆಹಲಿ ಚಲೋ’ ನಡೆಸಿದ್ದರು.



Join Whatsapp