ನದಿ ವಿವಾದ: ಈ ಜಾಗದಲ್ಲಿ ಕೂತು ತೀರ್ಮಾನ ಮಾಡುವುದೇ ಹಿಂಸೆಯಾಗಿದೆ ದೇವೇಗೌಡ್ರೇ ಎಂದ ಮೋದಿ

Prasthutha|

ನವದೆಹಲಿ:  ಅಂತರ್ ರಾಜ್ಯ ನದಿ ನೀರಿನ ಹಂಚಿಕೆ ಸೇರಿದಂತೆ ಹಲವು ವಿಚಾರಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿರುವುದಾಗಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ತಿಳಿಸಿದ್ದಾರೆ.

- Advertisement -

ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಂಗಳವಾರ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ, ನಮ್ಮ ರಾಜ್ಯದ ನೀರಾವರಿ ವಿಚಾರಗಳನ್ನು ಪ್ರಧಾನಿಯವರ ಬಳಿ ಪ್ರಸ್ತಾಪ ಮಾಡಿದ್ದೇನೆ. ಕಾವೇರಿ, ಕೃಷ್ಣಾ ಮಹಾದಾಯಿ ವಿಚಾರವನ್ನು ಪ್ರಸ್ತಾಪಿಸಿದ್ದೇನೆ. ನೀರಾವರಿ ಯೋಜನೆಗಳಲ್ಲಿ ರಾಜ್ಯಕ್ಕೆ ಅನ್ಯಾಯವಾಗಿರುವ ವಿಷಯವನ್ನು ವಿವರವಾಗಿ ಪ್ರಧಾನಿ ಮೋದಿಯವರಿಗೆ ವಿವರಿಸಿದ್ದೇನೆ ಎಂದರು.

ರಾಜ್ಯದ ಯೋಜನೆಗಳಿಗೆ ಆಗಿರುವ ಅನ್ಯಾಯಗಳ ಬಗ್ಗೆ ಪ್ರಧಾನಿಯವರ ಗಮನಕ್ಕೆ ತಂದಿದ್ದೇನೆ. ಸಂಸತ್ ನಲ್ಲಿ ಭೇಟಿಯಾಗಿ ಮೋದಿಯವರೊಂದಿಗೆ ಚರ್ಚಿಸಿದ್ದೇನೆ. ಈ ಜಾಗದಲ್ಲಿ ಕೂತು ತೀರ್ಮಾನ ಮಾಡುವುದು ಹಿಂಸೆಯಾಗಿದೆ ದೇವೇಗೌಡರೇ ಎಂದು ಹೇಳಿದರು. ನದಿ ನೀರಿನ ವ್ಯಾಜ್ಯಗಳ ತೀರ್ಮಾನ ಕಷ್ಟವಾಗಿದೆ, ನಮ್ಮದೇ ಸರಕಾರ ಇದ್ದರೂ ನರ್ಮದಾ ತೀರ್ಮಾನ ಕಷ್ಟವಾಗಿದೆ. ನಮ್ಮವರೇ ನಮಗೆ ವಿರೋಧ ಮಾಡುತ್ತಿದ್ದಾರೆ. ಎಲ್ಲಾ ನದಿಗಳದ್ದು ವಿವಾದಗಳಿವೆ. ಯಾವ ನಿರ್ಧಾರ ತೆಗೆದುಕೊಳ್ಳುವುದು..?ಎಂದು ಪ್ರಧಾನಿ ಮೋದಿ ಕೇಳಿದರು ಎಂದು ದೇವೇಗೌಡ ಹೇಳಿದರು.

- Advertisement -

ಕುಂಚಿಟಿಗ ಸಮುದಾಯಕ್ಕೆ ಅನ್ಯಾಯ ಆಗಿರುವ ಬಗ್ಗೆ ವಿವರವಾಗಿ ಹೇಳಿದ್ದೇನೆ. ಕುಂಚಿಟಿಗ ಸಮಯದಾಯ ಕರ್ನಾಟಕದಲ್ಲಿ 6/7 ತಾಲೂಕುಗಳಲ್ಲಿದೆ. ಕುಂಚಿಟಿಗ ಸಮುದಾಯಕ್ಕೆ ಅನ್ಯಾಯವಾಗಿರುವುದು ನಿಜ. ಈ ಸಮುದಾಯವನ್ನು ಪ್ರತ್ಯೇಕವಾಗಿ ಗುರುತಿಸಬೇಕಿದೆ. ಕೇಂದ್ರ  ಸರ್ಕಾರವು ಈ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸಬೇಕು ಎಂದು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದೇನೆ ಎಂದರು.

ಹಾಸನ ಏರ್ ಪೋರ್ಟ್ ವಿಚಾರವನ್ನು ಪ್ರಸ್ತಾಪ ಮಾಡಿದ್ದೇನೆ. ಇನ್ನೂ ಏರ್ ಪೋರ್ಟ್ ಕೆಲಸ ಆಗಿಲ್ಲ. ನೀವೇ ತೀರ್ಮಾನ ಮಾಡಿ ಎಂದು ಮೋದಿಯವರಿಗೆ ಕೇಳಿಕೊಂಡಿದ್ದೇನೆ ಎಂದು ಎಂದು ಪ್ರಧಾನಿ ಭೇಟಿಯ ಬಗ್ಗೆ ದೇವೇಗೌಡ ವಿವರ ನೀಡಿದರು.

Join Whatsapp