ಗಡಿ ವಿವಾದ| ಕೇಂದ್ರ ಗೃಹ ಸಚಿವರ ಸಭೆಗೆ ಬೊಮ್ಮಾಯಿ ತೆರಳಿದ್ದು ಪ್ರಮಾದ: ಎಚ್.ಕೆ.ಪಾಟೀಲ್

Prasthutha|

ಶಿರಸಿ: ‘ಗಡಿ ವಿವಾದ ವಿಚಾರದಲ್ಲಿ ಕೇಂದ್ರ ಗೃಹ ಸಚಿವರು ಕರ್ನಾಟಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಸಭೆ ಕರೆದಿರುವುದು ಅಪರಾಧ. ಸಭೆಗೆ ತೆರಳಿದ್ದು ಮುಖ್ಯಮಂತ್ರಿ ಬೊಮ್ಮಾಯಿ ಮಾಡಿರುವ ಪ್ರಮಾದ’ ಎಂದು ಶಾಸಕ ಎಚ್.ಕೆ.ಪಾಟೀಲ್ ಹೇಳಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗಡಿ ವಿವಾದ ವಿಚಾರದಲ್ಲಿ ಸುಪ್ರಿಂಕೋರ್ಟ್ ಮಹಾರಾಷ್ಟ್ರದ ವಾದವನ್ನು ಎರಡು ಬಾರಿ ತಳ್ಳಿಹಾಕಿದೆ. ಇಂತಹ ಸಂದರ್ಭದಲ್ಲಿ ಅಶಾಂತಿ ಇದೆ ಎಂಬುದನ್ನು ಬಿಂಬಿಸಲು ಪ್ರಯತ್ನ ನಡೆದಿದೆ. ಅದಕ್ಕಾಗಿ ಕೇಂದ್ರ ಸರ್ಕಾರ ಸಮಿತಿ ರಚಿಸಲು ಹೊರಟಿದೆ. ಇದಕ್ಕೆ ರಾಜ್ಯ ಸರ್ಕಾರ ಸಮ್ಮತಿಸಬಾರದು’ ಎಂದು ಒತ್ತಾಯಿಸಿದರು.

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಡಿ.14ರಂದು ಬುಧವಾರ ಉಭಯ ರಾಜ್ಯ ಗಳ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಿ ಚರ್ಚಿಸಿದ್ದರು.
ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಹಾಗೂ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಎರಡೂ ರಾಜ್ಯಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Join Whatsapp