Home ಟಾಪ್ ಸುದ್ದಿಗಳು ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ: ಸಿದ್ದರಾಮಯ್ಯ

ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನ್ನ ರಾಜಕೀಯ ಬದುಕು ಬಾಬಾ ಸಾಹೇಬರ ಋಣ. ಈ ಋಣ ಸಂದಾಯಕ್ಕೆ ನನ್ನ ರಾಜಕೀಯ ಮುಡಿಪು. ಮಹಾಗುರುವಿಗೆ ನಮನಗಳು. ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಯ ಪ್ರತಿರೂಪವಾಗಿರುವ ಸಂವಿಧಾನಕ್ಕೆ ಎದುರಾಗಿರುವ ಬೆದರಿಕೆಯ ವಿರುದ್ಧ ಹೋರಾಡುವುದೇ ಸಂವಿಧಾನ ಶಿಲ್ಪಿಗೆ ನಾವು ಸಲ್ಲಿಸುವ ಅತ್ಯುನ್ನತ ಗೌರವ. ಈ ಹೋರಾಟಕ್ಕೆ ಬಾಬಾಸಾಹೇಬರ ಚಿಂತನೆಗಳು ನಮ್ಮ ಆಯುಧವಾಗಲಿ ಎಂದು ಹಾರೈಸಿದ್ದಾರೆ.


ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗದೆ ರಾಜಕೀಯ ಪ್ರಜಾಪ್ರಭುತ್ವ ಬಾಳಲಾರದು. ಎಂಬ ಬಿ.ಆರ್.ಅಂಬೇಡ್ಕರರ ಎಚ್ಚರಿಕೆಯ ಸಂದೇಶವನ್ನು ನಾನು ಮಂಡಿಸಿರುವ ಹದಿಮೂರು ಬಜೆಟ್ ಗಳಲ್ಲಿ ಪಾಲಿಸಿದ್ದೇನೆ. ಇದು ನಾನು ಬಾಬಾ ಸಾಹೇಬರಿಗೆ ಸಲ್ಲಿಸಿದ ಗೌರವವೂ ಹೌದು. ನಿರ್ಲಕ್ಷ್ಯ, ತುಚ್ಛೀಕರಣ, ದೈವೀಕರಣದ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ದಮನಿಸಲು ಪ್ರಯತ್ನಿಸಿ ವಿಫಲರಾದ ಕೋಮುವಾದಿ ಶಕ್ತಿಗಳು ಈಗ ಬಾಬಾಸಾಹೇಬರನ್ನು ಆಪೋಶನ ತೆಗೆದುಕೊಂಡು ತಮ್ಮವರನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಈ ಹುನ್ನಾರದ ಬಗ್ಗೆ ನಾವು ಎಚ್ಚರವಾಗಿರಬೇಕು ಎಂದು ಕರೆ ನೀಡಿದ್ದಾರೆ.

Join Whatsapp
Exit mobile version