ನವದೆಹಲಿ: ಒಂದು ವೇಳೆ ಕೇಂದ್ರದಲ್ಲಿ ಬೇರೆ ಪಕ್ಷ ಅಧಿಕಾರದಲ್ಲಿ ಇರುತ್ತಿದ್ದರೆ ಸಂಸತ್ತಿನಲ್ಲಿ ಭದ್ರತಾ ವೈಫಲ್ಯ ಸಂಬಂಧ ಬಿಜೆಪಿಯವರು ಇಡೀ ದೆಹಲಿಯನ್ನು ಬಂದ್ ಮಾಡಿಸುತ್ತಿದ್ದರು ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ವಾಗ್ದಾಳಿ ನಡೆಸಿದ್ದಾರೆ.
ಘಟನೆಯ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರದಲ್ಲಿ ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿರುತ್ತಿದ್ದರೆ, ಈ ವಿಷಯದ ಬಗ್ಗೆ ಬಿಜೆಪಿ ಇಡೀ ದೆಹಲಿಯನ್ನು ಬಂದ್ ಮಾಡುತ್ತಿತ್ತು. ಆದರೆ ಘಟನೆ ಸಂಬಂಧ ಬಿಜೆಪಿ ಸಂಸದರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು. ಆರೋಪಿಗಳನ್ನು ಸಂಸತ್ತಿಗೆ ಪ್ರವೇಶಿಸಲು ಯಾರು ಕೊಟ್ಟರು?. ರಾಷ್ಟ್ರೀಯ ಭದ್ರತೆಯ ಈ ವಿಷಯದಲ್ಲಿ ಯಾವುದೇ ರಾಜಕೀಯ ಮಾಡಬಾರದು. ಪ್ರಧಾನಿಯವರು ಸಂಸತ್ತಿನಲ್ಲಿ ಈ ವಿಷಯದ ಬಗ್ಗೆ ಮಾತನಾಡಬೇಕು ಎಂದು ಸಂಜಯ್ ರಾವತ್ ಆಗ್ರಹಿಸಿದ್ದಾರೆ.