Home ಟಾಪ್ ಸುದ್ದಿಗಳು ಪ್ರಸ್ತುತ ವರ್ಷದ ಹಜ್ ಯಾತ್ರೆಯ ಎಲ್ಲಾ ಅರ್ಜಿಗಳನ್ನು ರದ್ದುಗೊಳಿಸಿದ ಹಜ್ ಸಮಿತಿ

ಪ್ರಸ್ತುತ ವರ್ಷದ ಹಜ್ ಯಾತ್ರೆಯ ಎಲ್ಲಾ ಅರ್ಜಿಗಳನ್ನು ರದ್ದುಗೊಳಿಸಿದ ಹಜ್ ಸಮಿತಿ

2021 ರ ಹಜ್ ಯಾತ್ರೆಯ ಎಲ್ಲಾ ಅರ್ಜಿಗಳನ್ನು ರದ್ದುಗೊಳಿಸಲಾಗಿದೆ ಎಂದು ಭಾರತೀಯ ಹಜ್ ಸಮಿತಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಕೋವಿಡ್ -19 ರ ಹಿನ್ನೆಲೆಯಲ್ಲಿ ಭಾನುವಾರ ಸೌದಿ ಅರೇಬಿಯಾವು ವಿದೇಶದಿಂದ ಹಜ್ ಯಾತ್ರೆಗೆ ಆಗಮಿಸುವ ಯಾತ್ರಿಗರಿಗೆ ನಿಷೇಧ ಹೇರಿತ್ತು. ಅಲ್ಲದೆ ಈ ಬಾರಿ ಸೌದಿ ಅರೇಬಿಯಾದಲ್ಲಿರುವ ನಾಗರಿಕರು ಮತ್ತು ನಿವಾಸಿಗಳಿಗೆ ಸೀಮಿತ ಸಂಖ್ಯೆಯಲ್ಲಿ ಅನುಮತಿ ನೀಡಿದೆ. ಈ ಹಿನ್ನಲೆಯಲ್ಲಿ ಭಾರತದ ಹಜ್ ಸಮಿತಿಯೂ ಎಲ್ಲಾ ಅರ್ಜಿಗಳನ್ನು ರದ್ದುಗೊಳಿಸಿ ಆದೇಶಿಸಿದೆ.

ಕೊರೋನ ವೈರಸ್‌ನಿಂದಾಗಿ 2020ರ ಹಜ್ ಯಾತ್ರೆಯನ್ನು ರದ್ದುಗೊಳಿಸಲಾಗಿತ್ತು. ಯಾತ್ರೆಗಾಗಿ 2.13 ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಯಾತ್ರೆಯನ್ನು ರದ್ದುಗೊಳಿಸಿದ ಬಳಿಕ ಸರಕಾರವು ಶುಲ್ಕ ಮರುಪಾವತಿಯನ್ನು ಮಾಡಿತ್ತು

Join Whatsapp
Exit mobile version