ವಿಜಯನಗರ: ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 7 ಕೋಟಿ ರುಪಾಯಿ ವಂಚಿಸಿರುವ ಆರೋಪದ ಮೇರೆಗೆ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರಾಳನ್ನು ಮಂಗಳವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ಚೈತ್ರಾ ಜೊತೆಗೆ ಪ್ರಸಾದ್, ಗಗನ್ ಕಡೂರು, ಪ್ರಜ್ವಲ್ ಶೆಟ್ಟಿ ಆರ್ ಎಸ್ ಧನರಾಜ್, ರಮೇಶ್, ಶ್ರೀಕಾಂತ್ ನನ್ನೂ ಕೂಡಾ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸ್ವಾಮೀಜಿಯೊಬ್ಬರ ಹೆಸರು ಕೇಳಿಬಂದಿದೆ. ಹಗಡಲಿ ತಾಲೂಕಿನ ಹಿರೇಹಡಗಲಿ ಹಾಲು ಮಠದ ಅಭಿನವ ಹಾಲಶ್ರೀ A3 ಆರೋಪಿಯಾಗಿದ್ದು, ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಹಾಲಶ್ರೀ ಯಾರ ಕೈಗೂ ಸಿಗದೇ ಅಜ್ಞಾತ ಸ್ಥಳಕ್ಕೆ ತರಳಿದ್ದಾರೆ.
ಉದ್ಯಮಿ ಗೋವಿಂದ್ ಬಾಬು ಕಡೆದಿಂದ ಕೋಟ್ಯಂತರ ರೂಪಾಯಿ ಪಡೆದು ವಂಚನೆ ಕೇಸ್ ನಲ್ಲಿ ಮೂರು ಆರೋಪಿಗಳ ಬಂಧನವಾಗುತ್ತಿದ್ದಂತೆಯೇ 3ನೇ ಆರೋಪಿಯಾಗಿರುವ ಹಿರೇಹಡಗಲಿ ಹಾಲ ಮಠದ ಅಭಿನವ ಹಾಲಶ್ರೀ ನಾಪತ್ತೆಯಾಗಿದ್ದಾರೆ. ಹಾಲ ಮಠಕ್ಕೂ ಬಾರದೇ, ಯಾರ ಸಂಪರ್ಕಕ್ಕೂ ಸಿಗದ ಅಜ್ಞಾತ ಸ್ಥಳಕ್ಕೆ ತರಳಿದ್ದಾರೆ. ಇನ್ನು ಬೆಳಗಿನಿಂದ ಹಾಲಶ್ರೀ ಮೊಬೈಲ್ ಸ್ವೀಚ್ ಆಫ್ ಆಗಿದೆ.