Home ಟಾಪ್ ಸುದ್ದಿಗಳು ಶೌಚಾಲಯಕ್ಕಾಗಿ ಒತ್ತಾಯ: ಪಾಲಿಕೆ ಮುಂದೆ ಅರೆಬೆತ್ತಲೆ ಪ್ರತಿಭಟನೆ

ಶೌಚಾಲಯಕ್ಕಾಗಿ ಒತ್ತಾಯ: ಪಾಲಿಕೆ ಮುಂದೆ ಅರೆಬೆತ್ತಲೆ ಪ್ರತಿಭಟನೆ

ಮುಂಬೈ:  ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ಶೌಚಾಲಯ ನಿರ್ಮಾಣ ಮಾಡಲು ಹಲವು ಬಾರಿ ಪಾಲಿಕೆಗೆ ಮನವಿ ಮಾಡಿದ್ದರೂ, ಈ ಬಗ್ಗೆ ಕ್ರಮ ಕೈಗೊಳ್ಳದಿರುವುದಕ್ಕೆ ವ್ಯಕ್ತಿಯೊಬ್ಬ ಮಹಾನಗರ ಪಾಲಿಕೆ ಮುಂದೆ ಏಕಾಂಗಿಯಾಗಿ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ ಘಟನೆ ಔರಂಗಾಬಾದ್ ನಡೆದಿದೆ. ಕಚೇರಿ ಪ್ರವೇಶಿಸಲು ಮುಂದಾದಾಗ ಆತನನ್ನು ಬಂಧಿಸಲಾಗಿದೆ.

ಮಾರುಕಟ್ಟೆ ಪ್ರದೇಶದಲ್ಲಿ ಶೌಚಾಲಯ ನಿರ್ಮಾಣ ಮಾಡಲು ಹಲವು ಬಾರಿ ಪಾಲಿಕೆ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಪ್ರತಿಕ್ರಿಯಿಸದಿದ್ದರೆ ಅರೆ ಬೆತ್ತಲೆಯಾಗಿ ಪ್ರತಿಭಟನೆ ಮಾಡುವುದಾಗಿ ಎಂದು ಪ್ರತಿಭಟನಕಾರ ಎಚ್ಚರಿಕೆ ನೀಡಿದ್ದನು.

ಇದನ್ನು ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದರಿಂದ ಮಂಗಳವಾರ  ಬೆಳಗ್ಗೆ ಪಾಲಿಕೆ ಮುಂದೆ ಪ್ರತಿಭಟನೆ ಆರಂಭಿಸಿದ ರಮೇಶ್ ಪಾಟೀಲ್ ಎಂಬುವವರು, ಪಾಲಿಕೆ ವಿರುದ್ಧ ಘೋಷಣೆ ಕೂಗಿ ಅರೆಬೆತ್ತಲೆಯಾಗಿ ಪ್ರತಿಭಟನೆ ಶುರು ಮಾಡಿದ್ದಾರೆ. ಇದರಿಂದ ಮುಜುಗರಕ್ಕೀಡಾದ ಅಧಿಕಾರಿಗಳು ಪೊಲೀಸರ ನೆರವಿನಿಂದ ಆತನನ್ನು ತಡೆದು ಬಲವಂತವಾಗಿ ಬಂಧಿಸಿದ್ದಾರೆ.

ನಗರದ ಪ್ರಮುಖ ಮಾರುಕಟ್ಟೆಯಾದ ಗುಲ್ಮಂಡಿಯಲ್ಲಿ ದಿನಂಪ್ರತಿ ಸಾವಿರಾರು ಜನರು ವಹಿವಾಟಿಗೆ ಬರುತ್ತಾರೆ. ನಿತ್ಯಕರ್ಮಕ್ಕೆ ಶೌಚಾಲಯ ಇಲ್ಲವಾಗಿದೆ. ಇದ್ದ ಶೌಚಾಲಯವನ್ನು ಪಾಲಿಕೆ ಅಧಿಕಾರಿಗಳು ತೆರವು ಮಾಡಿದ್ದಾರೆ. ಶೌಚಾಲಯ ನಿರ್ಮಿಸಬೇಕು ಎಂದು ಒತ್ತಾಯ ಕೇಳಿ ಬಂದಿತ್ತು. ಆದರೆ ಔರಂಗಾಬಾದ್ ಮಹಾನಗರ ಪಾಲಿಕೆ ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

Join Whatsapp
Exit mobile version