ಬೆಂಗಳೂರು: ಇನ್ನು ಆರು ತಿಂಗಳಲ್ಲಿ ಬಿಜೆಪಿಯ ಅರ್ಧದಷ್ಟು ನಾಯಕರು ಜೈಲಿನಲ್ಲಿರುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಕುರಿತು ತನಿಖೆ ನಡೆಸಲಿದ್ದು, ಮುಂದಿನ ಆರು ತಿಂಗಳಲ್ಲಿ ರಾಜ್ಯದ ಅರ್ಧದಷ್ಟು ಬಿಜೆಪಿ ನಾಯಕರು ಜೈಲಿನಲ್ಲಿರುತ್ತಾರೆ ಅಥವಾ ಜಾಮೀನಿಗಾಗಿ ಓಡುತ್ತಾರೆ ಎಂದರು.
ಬಿಜೆಪಿ ನಾಯಕರ ಮೇಲೆ 35ಕ್ಕೂ ಹೆಚ್ಚು ಪ್ರಕರಣಗಳಿದ್ದು, ಮೂರ್ನಾಲ್ಕು ಪ್ರಕರಣಗಳಲ್ಲಿ ಮಧ್ಯಂತರ ವರದಿ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರ ಅಪರಾಧ ತನಿಖಾ ಇಲಾಖೆಯ ವಿಶೇಷ ತನಿಖಾ ತಂಡವನ್ನು ರಚಿಸಿದೆ ಎಂದರು.