ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಕಾರಿಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು

Prasthutha|

ಮಂಡ್ಯ: ಮಂಡ್ಯ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ ಗಂಗಾಧರ್ ಕಾರಿಗೆ ಕಾರ್ಯಕರ್ತರು ಮೊಟ್ಟೆ ಎಸೆದ ಘಟನೆ ಕೆಆರ್ ಪೇಟೆಯಲ್ಲಿ ನಡೆದಿದೆ.

- Advertisement -


ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ನಾರಾಯಣಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಧ್ಯಕ್ಷರ ಕಾರಿಗೆ ಮೊಟ್ಟೆ ಎಸೆದಿದ್ದಾರೆ.


ಕೆಆರ್ ಪೇಟೆಯಲ್ಲಿ ಪ್ರಜಾಧ್ವನಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಅವರು ಇಂದು ಪೂರ್ವಭಾವಿ ಸಭೆ ಕರೆದಿದ್ದರು. ಈ ಸಭೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

- Advertisement -


ನಾರಾಯಣಗೌಡ ಕಾಂಗ್ರೆಸ್’ ಗೆ ಬಂದರೆ ಪ್ರಜಾಧ್ವನಿ ಯಾತ್ರೆಗೆ ಕಲ್ಲು ಹೊಡೆಯುತ್ತೇವೆ. ನಾರಾಯಣಗೌಡ ಕಾಂಗ್ರೆಸ್’ಗೆ ಬರಬಾರದು ಎಂದು ಕಾರ್ಯಕರ್ತರು ಕಾಂಗ್ರೆಸ್ ನಾಯಕರನ್ನು ತೀವ್ರ ತರಾಟೆ ತೆಗೆದುಕೊಂಡಿದ್ದಾರೆ.

Join Whatsapp