ಹನುಮಾನ್ ಚಾಲೀಸ ಪಠಣ ಬೆದರಿಕೆವೊಡ್ಡಿದ ರಾಣಾ ದಂಪತಿಗೆ ಜಾಮೀನು

Prasthutha|

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸದ ಎದುರು ಹನುಮಾನ್ ಚಾಲೀಸ ಪಠಿಸುವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ್ರೋಹ ಕಾಯ್ದೆ ಅಡಿಯಲ್ಲಿ ಬಂಧಿತ ರಾಣಾ ದಂಪತಿಗೆ ಸೆಷನ್ಸ್ ಕೋರ್ಟ್ ಬುಧವಾರ ಜಾಮೀನು ನೀಡಿದೆ.

- Advertisement -

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಬಾಂದ್ರಾದಲ್ಲಿರುವ ಖಾಸಗಿ ನಿವಾಸವಾದ ಮಾತೋಶ್ರೀ ಎದುರು ಹನುಮಾನ್ ಚಾಲೀಸ ಪಠಿಸುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಅಮರಾವತಿ ಸಂಸದೆ- ಶಾಸಕ ದಂಪತಿಯನ್ನು ಎಪ್ರಿಲ್ 23 ರಂದು ಮುಂಬೈ ಪೊಲೀಸರು ಬಂಧಿಸಿದ್ದರು.

ಉದ್ಧವ್ ಠಾಕ್ರೆ ಅವರ ನಿವಾಸದ ಎದುರು ಚಾಲೀಸ ಪಠಿಸುವ ಬೆದರಿಕೆವೊಡ್ಡಿದ ದಂಪತಿಯ ನಡೆಯಿಂದ ಕೆರಳಿದ ಶಿವಸೇನಾ ಕಾರ್ಯಕರ್ತರು ಅವರ ನಿವಾಸದ ಹೊರಗೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದರು.

- Advertisement -

ಈ ಮಧ್ಯೆ ಬಂಧಿತ ದಂಪತಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಏಪ್ರಿಲ್ 24 ರಂದು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ ದಂಪತಿಗೆ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ.

Join Whatsapp