ಹನುಮ ಧ್ವಜ ವಿವಾದ: ಸಿಎಂ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ ಕುಮಾರಸ್ವಾಮಿ

Prasthutha|

ಮಂಡ್ಯ: ಹನುಮ ಧ್ವಜ ತೆರವು ಕಾಂಗ್ರೆಸ್ ಸರಕಾರದ ಉದ್ಧಟತನವನ್ನು ತೋರಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

- Advertisement -


ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕೇಸರಿ ಶಾಲು ಧರಿಸಿ ಭಾಗಿಯಾಗಿದ ಕುಮಾರಸ್ವಾಮಿ, ಜೈ ಶ್ರೀರಾಮ್ ಘೋಷಣೆಯೊಂದಿಗೆ ಭಾಷಣ ಆರಂಭಿಸಿದರು.
ಸಿದ್ದರಾಮಯ್ಯ ಹೆಸರಿನಲ್ಲಿ ರಾಮ ಇದ್ದರೆ ಸಾಲದು, ನಿಮ್ಮಲ್ಲಿ ರಾಮನ ನಡವಳಿಕೆ ಇರಬೇಕು. ಇಲ್ಲಿ ನಡೆದಿರುವ ಲಾಠಿ ಚಾರ್ಜ್ ಸರಕಾರದ ರಾಕ್ಷಸಿ ಪ್ರವೃತ್ತಿ ತೋರಿಸುತ್ತದೆ. ಸಿದ್ದರಾಮಯ್ಯ ಸರಕಾರಕ್ಕೆ ಎಚ್ಚರಿಕೆ ಕೊಡುತ್ತಿದ್ದೇನೆ. ನಿಮ್ಮ ತಪ್ಪು ತಿದ್ದಿಕೊಳ್ಳಿ. ರಾಜಕೀಯ ಮಾಡಿದ್ದು ನೀವು. ಅಧಿಕಾರದ ಅಮಲಿನಲ್ಲಿ ದೈಹಿಕ ಹಲ್ಲೆ ಮಾಡಿಸಿದ್ದೀರಿ. ಈ ಹೋರಾಟ ಇಲ್ಲಿಗೆ ನಿಲ್ಲಿಸುವ ಪ್ರಶ್ನೆ ಇಲ್ಲ. ನಮ್ಮ ಕಾರ್ಯಕರ್ತರಿಗೆ ದೈಹಿಕವಾಗಿ ಪೆಟ್ಟು ಕೊಟ್ಟಿದ್ದೀರಿ. ಇದಕ್ಕೆ ಅಧಿಕಾರಿಗಳಿಗೆ ಪ್ರಾಯಶ್ಚಿತ್ತವಾಗಲೇ ಬೇಕು ಎಂದರು.


ಹನುಮ ಧ್ವಜ ತೆರವು ವಿರೋಧಿಸಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಜನರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಲಾಠಿ ಚಾರ್ಜ್ ವೇಲೆ ಒಬ್ಬರ ಕಣ್ಣಿಗೆ ಏಟು ಬಿದ್ದಿದೆ. ಕಣ್ಣು ಹೋಗಿದ್ದರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಣ್ಣು ತಂದು ಕೊಂಡುತ್ತಿತ್ತಾ? ಪೊಲೀಸರೇ ಎಚ್ಚರವಾಗಿರಿ. ಎಷ್ಟು ದಿನ ನಿಮ್ಮ ಆಟ ನಡೆಯುತ್ತದೆ ನಾನು ನೋಡುತ್ತೇನೆ. ಯಾವಾನೋ ಹೇಳುತ್ತಾನೆ ಅಂತಾ ಹೇಗೆ ಬೇಕೋ ಹಾಗೇ ಕೆಲಸ ಮಾಡುವುದನ್ನು ನಾವು ಒಪ್ಪಲ್ಲ ಎಂದು ಹೇಳಿದರು.



Join Whatsapp