ಪ್ರವಾದಿ ಮುಹಮ್ಮದ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆ ಖಂಡಿಸಿದ ಹರಮೈನ್ ಶರೀಫೈನ್

Prasthutha|

ರಿಯಾದ್: ಪ್ರವಾದಿ ಮುಹಮ್ಮದ್ ವಿರುದ್ಧ ಬಿಜೆಪಿ ಶಾಸಕ ರಾಜಾ ಸಿಂಗ್ ನೀಡಿರುವ ವಿವಾದಾತ್ಮಕ ಹೇಳಿಕೆಯನ್ನು ಆನ್ ಲೈನ್ ಸುದ್ದಿ ಮಾಧ್ಯಮವಾದ ಹರಮೈನ್ ಶರೀಫೈನ್ ತೀವ್ರವಾಗಿ ಖಂಡಿಸಿದೆ.

- Advertisement -

ಭಾರತದ ಆಡಳಿತಾರೂಢ ಬಿಜೆಪಿಯ ಸದಸ್ಯರಾಗಿರುವ ಗೋಶಾಮಹಲ್ ಶಾಸಕ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿದ ಹರಮೈನ್ ಶರೀಫೈನ್, ಕೋಮು ಉದ್ವಿಗ್ನತೆಯನ್ನು ಸೃಷ್ಟಿಸುವ ಅಂಶಗಳನ್ನು ನಿರ್ಬಂಧಿಸಲು,ಇಸ್ಲಾಮೋಫೋಬಿಯಾ ಹರಡುವುದನ್ನು ತಡೆಯಲು ಮತ್ತು ಧಾರ್ಮಿಕ ಸಾಮರಸ್ಯವನ್ನು ಕಾಪಾಡಿಕೊಳ್ಳಲು ಕ್ರಮಗಳನ್ನು ಕೈಗೊಳ್ಳುವಂತೆ ಹರಮೈನ್ ಅಂತರರಾಷ್ಟ್ರೀಯ ಸಂಸ್ಥೆಗಳಿಗೆ ಕರೆ ನೀಡಿದೆ.

ಸೋಮವಾರ ತಡರಾತ್ರಿ ಯೂಟ್ಯೂಬ್ನಲ್ಲಿ ಬಿಡುಗಡೆ ಮಾಡಿದ ‘ಹಾಸ್ಯ ವೀಡಿಯೊ’ ದಲ್ಲಿ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ರಾಜಾ ಸಿಂಗ್ ಅವರನ್ನು ಹೈದರಾಬಾದ್ ಪೊಲೀಸರು ಮಂಗಳವಾರ ಬೆಳಿಗ್ಗೆ ಬಂಧಿಸಿದ್ದರು.

- Advertisement -

ವೀಡಿಯೊ ಬಿಡುಗಡೆಯಾದ ನಂತರ, ರಾಜಾ ಸಿಂಗ್ ವಿರುದ್ಧ ನಗರದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದವು. ಬಿಜೆಪಿ ಶಾಸಕನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗಿದ್ದು, ಪಕ್ಷದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸಿಂಗ್ ಅವರನ್ನು ಬಿಜೆಪಿಯಿಂದ ಅಮಾನತುಗೊಳಿಸಲಾಗಿದೆ.

ರಾಜಾ ಸಿಂಗ್ ಬಂಧನದ ನಂತರ, ಆತನನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ತಾಂತ್ರಿಕ ಕಾರಣಗಳು ಮತ್ತು ಪೊಲೀಸರ ಸಾಕ್ಷ್ಯಾಧಾರಗಳ ಕೊರತೆ ಮೇರೆಗೆ ನ್ಯಾಯಾಲಯವು ಜಾಮೀನು ನೀಡಿದೆ.

Join Whatsapp