ಅಪ್ರಾಪ್ತ ಬಾಲಕಿಗೆ ಕಿರುಕುಳ| ಹೆಡ್ ಕಾನ್ಸ್ಟೇಬಲ್ ಬಂಧನ

Prasthutha|

ಮಂಗಳೂರು: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಸಿಬ್ಬಂದಿಯನ್ನು ಬಂಧಿಸಲಾಗಿದೆ.

- Advertisement -

ಜನವರಿಯಲ್ಲಿ ಆಟೋ ಚಾಲಕನಿಂದ ಕಿರುಕುಳಕ್ಕೊಳಗಾಗಿದ್ದ ಅಪ್ರಾಪ್ತ ಬಾಲಕಿ ಕುಟುಂಬದೊಂದಿಗೆ ನಗರದ ಪೊಲೀಸ್ ಠಾಣೆಗೆ ಹೋಗಿ ಈ ಬಗ್ಗೆ ದೂರು ನೀಡಿದ್ದಳು. ಬಳಿಕ ಬಾಲಕಿಯಿಂದ ಮೊಬೈಲ್ ನಂಬರ್ ಪಡೆದು ಪೊಲೀಸ್ ಹೆಡ್ ಕಾನ್ಸ್ಟೇಬಲ್ ಫೋನ್, ಮೆಸೇಜ್ ಮೂಲಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

ಬಾಲಕಿ ಕುಟುಂಬಸ್ಥರು ಚೈಲ್ಡ್ ವೆಲ್ಪೇರ್ ಕಮೀಟಿಗೆ ದೂರು ನೀಡಿದ್ದು, ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಅಪ್ರಾಪ್ತ ಬಾಲಕಿ ಕಿರುಕುಳ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್ ತಿಳಿಸಿದ್ದಾರೆ.

Join Whatsapp