ಐದು ಕೋಟಿ ಮೌಲ್ಯದ ಹಾರ್ದಿಕ್ ಪಾಂಡ್ಯಾರ ವಾಚ್ ಕಸ್ಟಮ್ಸ್ ಬಲೆಗೆ !

Prasthutha|

ಮುಂಬೈ: ದುಬೈ ಟಿ20 ವಿಶ್ವಕಪ್ ಸರಣಿ ಬಳಿಕ ಭಾರತಕ್ಕೆ ಹಿಂದಿರುಗುತ್ತಿದ್ದ ಭಾರತದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರ 5 ಕೋಟಿ ಮೌಲ್ಯದ ಎರಡು ವಾಚ್‌ಗಳನ್ನು ಕಸ್ಟಮ್ಸ್ ಇಲಾಖೆಯು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದೆ.

- Advertisement -

ಹಾರ್ದಿಕ್ ಪಾಂಡ್ಯ ಬಳಿ ದುಬಾರಿ ವಾಚ್ ಗಳ ಇನ್ ವಾಯ್ಸ್ ಇರಲಿಲ್ಲ ಎನ್ನಲಾಗಿದ್ದು, ಹೀಗಾಗಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಐಸಿಸಿ ಟಿ20 ವಿಶ್ವಕಪ್ ನಿರಾಶಾದಾಯಕ ಫಲಿತಾಂಶದ ನಂತರ ಭಾರತೀಯ ಆಟಗಾರರು ತವರಿಗೆ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ವೇಳೆ ಹಾರ್ದಿಕ್ ಪಾಂಡ್ಯ ಅವರನ್ನು ಕಸ್ಟಮ್ಸ್ ಇಲಾಖೆ ತಡೆದು 5 ಕೋಟಿ ರೂಪಾಯಿ ಮೌಲ್ಯದ ಎರಡು ವಾಚ್‌ಗಳನ್ನು ವಶಕ್ಕೆ ಪಡೆದಿದೆ.

Join Whatsapp