Home ಟಾಪ್ ಸುದ್ದಿಗಳು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಬಿಜೆಪಿಯನ್ನು ಶ್ಲಾಘಿಸಿದ ಹಾರ್ದಿಕ್ ಪಟೇಲ್

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಬಿಜೆಪಿಯನ್ನು ಶ್ಲಾಘಿಸಿದ ಹಾರ್ದಿಕ್ ಪಟೇಲ್

ಅಹಮದಾಬಾದ್: ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಹೊರ ಬಂದ ಬೆನ್ನಲ್ಲೇ ಗುಜರಾತ್ ನ ಹಾರ್ದಿಕ್ ಪಟೇಲ್ ಬಿಜೆಪಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ನಡೆಯುತ್ತಿರುವ ಹಿಂದೂ ಪರ ಬೆಳವಣಿಗೆಗಳಿಂದ ಕಾಂಗ್ರೆಸ್ ಪಕ್ಷ ದೂರ ಇರುವುದು ಪಕ್ಷಕ್ಕೆ ಹಾನಿಯನ್ನುಂಟು ಮಾಡಿದ್ದು, ಇದಕ್ಕೆ ಜ್ಞಾನವಾಪಿ ಮಸೀದಿ ವಿವಾದ ಪ್ರಮುಖ ಉದಾಹರಣೆ ಎಂದು ತಿಳಿಸಿದರು. ದೇಶದಲ್ಲಿ ಅನೇಕರು ಮಹಾದೇವನ ಭಕ್ತರಿದ್ದಾರೆ. ಮಸೀದಿ ಅಥವಾ ಇತರ ಸ್ಥಳಗಳಲ್ಲಿ ಶಿವಲಿಂಗ ಪತ್ತೆಯಾದಾಗ ನಮ್ಮ ನಂಬಿಕೆಗಳು ಮತ್ತಷ್ಟು ಬಲಗೊಳ್ಳುತ್ತವೆ. ಇದನ್ನು ಎಲ್ಲರೂ ಮುಕ್ತ ಮನಸ್ಸಿನಿಂದ ಸ್ವಾಗತಿಸಬೇಕು. ಆದರೆ, ಕಾಂಗ್ರೆಸ್ ನಾಯಕರು ಅಂತಹ ನಿರ್ಧಾರ ಅಥವಾ ಹೇಳಿಕೆಗಳಿಂದ ದೂರ ಸರಿಯತ್ತಾರೆ ಎಂದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಬಿಜೆಪಿ ಶ್ಲಾಘಿಸಿರುವ ಹಾರ್ದಿಕ್ ಪಟೇಲ್, ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ಧು ನಿರ್ಧಾರಕ್ಕೂ ಮೆಚ್ಚುಗೆ ವ್ಯಕ್ತಪಡಿಸಿದರು.

Join Whatsapp
Exit mobile version