ಹರಿ ಕುಮಾರ್ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ನೇಮಕ

Prasthutha: November 30, 2021

ನವದೆಹಲಿ: ಭಾರತೀಯ ನೌಕಾಪಡೆಗೆ ವೈಸ್ ಅಡ್ಮಿರಲ್ ಆರ್. ಹರಿ ಕುಮಾರ್ ಅವರನ್ನು ನೌಕಾಪಡೆಯ ನೂತನ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದ್ದು, ಇಂದು ಅಧಿಕಾರ ಸ್ವೀಕರಿಸಲಿದ್ದಾರೆ.

ಹರಿ ಕುಮಾರ್‌ ಅವರು ಭಾರತೀಯ ನೌಕಾಪಡೆಯ ಅಡ್ಮಿರಲ್ ಕರಂಬಿರ್ ಸಿಂಗ್ ಅವರ ಸ್ಥಾನಕ್ಕೆ ನೇಮಕಗೊಂಡಿದ್ದು, ಕಳೆದ 39 ವರ್ಷಗಳ ವೃತ್ತಿ ಜೀವನದಲ್ಲಿ ಹರಿ ಕುಮಾರ್ ಅವರು ವಿವಿಧ ಕಮಾಂಡರ್, ಸಿಬ್ಬಂದಿ ಮತ್ತು ಬೋಧನಾ ನೇಮಕಾತಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

1981ರ ಡಿಸೆಂಬರ್ ನಲ್ಲಿ ಎ-ಸ್ಕ್ವಾಡ್ರನ್, 61 ಕೋರ್ಸ್ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯಿಂದ ಪದವಿ ಪಡೆದ ಇವರು 1983ರ ಜನವರಿ 1ರಂದು ನೌಕಾಪಡೆಯ ಕಾರ್ಯನಿರ್ವಾಹಕ ಶಾಖೆಗೆ ನೇಮಕಗೊಂಡಿದ್ದರು. ಆರ್. ಹರಿ ಕುಮಾರ್ ಅವರ ಸೇವೆಗೆ ಪರಮ ವಿಶಿಷ್ಟ ಸೇವಾ ಪದಕ, ಅತಿ ವಿಶಿಷ್ಟ ಸೇವಾ ಪದಕ ಮತ್ತು ವಿಶಿಷ್ಟ ಸೇವಾ ಪದಕ ಕೂಡ ಲಭಿಸಿದೆ

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!