Home ಟಾಪ್ ಸುದ್ದಿಗಳು ಹರಿದ್ವಾರದಲ್ಲಿ ಮುಸ್ಲಿಮರ ನರಮೇಧಕ್ಕೆ ಕರೆ। ವಿಚಾರಣೆ ಕೈಗೆತ್ತಿಕೊಳ್ಳಲಿರುವ ಸುಪ್ರೀಮ್ ಕೋರ್ಟ್

ಹರಿದ್ವಾರದಲ್ಲಿ ಮುಸ್ಲಿಮರ ನರಮೇಧಕ್ಕೆ ಕರೆ। ವಿಚಾರಣೆ ಕೈಗೆತ್ತಿಕೊಳ್ಳಲಿರುವ ಸುಪ್ರೀಮ್ ಕೋರ್ಟ್

ನವದೆಹಲಿ: ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ಮತ್ತು ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಸುಪ್ರೀಮ್ ಕೋರ್ಟ್ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.

ಹಿರಿಯ ವಕೀಲ ಹಾಗೂ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಜೆಐ ಎನ್.ವಿ. ರಮಣ, “ಪ್ರಸಕ್ತ ಪ್ರಕರಣದ ವಿಚಾರಣೆಯನ್ನು ನಾವು ಕೈಗೆತ್ತಿಕೊಳ್ಳುತ್ತೇವೆ” ಎಂದು ತಿಳಿಸಿದರು.

ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್ ಕಾರ್ಯಕ್ರಮದ ಕುರಿತು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಿದ್ದೇವೆ. ಪ್ರಸಕ್ತ ದೇಶದಲ್ಲಿ ಸಂಸ್ಕೃತಿಗಳು ಬದಲಾಗಿವೆ ಎಂದು ಸಿಬಲ್ ವಿವಾದಾತ್ಮಕ ಧಾರ್ಮಿಕ ಸಭೆಯ ವಿರುದ್ಧ ಸುಪ್ರೀಮ್ ಕೋರ್ಟ್ ಗೆ ತಿಳಿಸಿದರು.

ಘಟನೆಯ ಕುರಿತು ಈಗಾಗಲೇ ಪ್ರಕರಣ ದಾಖಲಾಗಿದ್ದು, ವಿಚಾರಣೆಯನ್ನು ಕೈಗೆತ್ತಿಕೊಳ್ಳಬೇಕೆಂದು ಕಪಿಲ್ ಸಿಬಲ್ ಸುಪ್ರೀಮ್ ಕೋರ್ಟ್ ಗೆ ಮನವಿ ಮಾಡಿದ್ದರು.

Join Whatsapp
Exit mobile version