ಹರಿದ್ವಾರ: ದರೋಡೆಕೋರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಪೇದೆ ಸಾವು!

Prasthutha|

ಹರಿದ್ವಾರ: ಉತ್ತರಾಖಂಡದ ಹರಿದ್ವಾರದಲ್ಲಿ ಬಂದೂಕುಧಾರಿ ದರೊಡೆಕೋರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಪೇದೆಯೊಬ್ಬರು ಸಾವನ್ನಪ್ಪಿದ್ದಾರೆ.

- Advertisement -

ದರೋಡೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಾಲ್ಕು ಆರೋಪಿಗಳನ್ನು ಬಂಧಿಸಲು ಹರಿಯಾಣದ ಫರೀದಾಬಾದ್ ನಿಂದ ಆಗಮಿಸಿದ ಪೊಲೀಸರಲ್ಲಿ ಒಬ್ಬರು ಗುಂಡೇಟಿಗೆ ಬಲಿಯಾಗಿದ್ದಾರೆ. ಈ ನಡುವೆ ಓರ್ವ ಪರಾರಿಯಾಗಿದ್ದು, ಉಳಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಹರಿಯಾಣ ಪೊಲೀಸರು ಹರಿದ್ವಾರ ಪೊಲೀಸರಿಗೆ ಮಾಹಿತಿ ನೀಡದೆ ಸ್ಥಳಕ್ಕೆ ಆಗಮಿಸಿದ್ದರು. ಮೊದಲು ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ಆದರೆ ಗುಂಪಿನಲ್ಲಿದ್ದ ಓರ್ವ ಆರೋಪಿ ತನ್ನ ಕೈಯಲ್ಲಿದ್ದ ರಿವಾಲ್ವರ್ ತೆಗೆದು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.

- Advertisement -

ಆದರೆ, ಓರ್ವ ಪೊಲೀಸ್ ಪೇದೆ ಘಟನಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆರೋಪಿಯನ್ನು ಹುಡುಕಲು ಪೊಲೀಸರು ತಮ್ಮ ಪ್ರಯತ್ನವನ್ನು ತೀವ್ರಗೊಳಿಸಿದ್ದಾರೆ.

Join Whatsapp