Home ಕರಾವಳಿ ಸೌದಿ ಜೈಲಿನಲ್ಲಿದ್ದ ಹರೀಶ್ ಬಂಗೇರ ಮರಳಿ ತಾಯ್ನಾಡಿಗೆ

ಸೌದಿ ಜೈಲಿನಲ್ಲಿದ್ದ ಹರೀಶ್ ಬಂಗೇರ ಮರಳಿ ತಾಯ್ನಾಡಿಗೆ

ಉಡುಪಿ: ಸೌದಿ ಅರೇಬಿಯಾದ ಜೈಲಿನಲ್ಲಿದ್ದ ಕುಂದಾಪುರದ ಬಿಜಾಡಿಯ ಹರೀಶ್ ಬಂಗೇರ ಕೊನೆಗೂ ಬಿಡುಗಡೆಯಾಗಿದ್ದು, ಇಂದು ತಾಯ್ನಾಡಿಗೆ ಮರಳಿದ್ದಾರೆ.

ಸೌದಿ ದೊರೆ ಮತ್ತು ಶ್ರದ್ಧಾಕೇಂದ್ರ ಮೆಕ್ಕಾದ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಹರೀಶ್ ಬಂಗೇರರನ್ನು 2019 ರಲ್ಲಿ ಸೌದಿಯಲ್ಲಿ ಬಂಧಿಸಲಾಗಿತ್ತು.

ಪತ್ನಿ ಸುಮನಾ ಮತ್ತು ಕುಟುಂಬಸ್ಥರು ಹಾಗೂ ಸ್ಥಳೀಯ ಹೋರಾಟಗಾರರು ಬುಧವಾರ ಹರೀಶ್‌ ಬಂಗೇರ ಅವರನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಲ್ಲಿ ಬರಮಾಡಿಕೊಂಡರು.

ಹಿರಿಯ ಪೊಲೀಸ್‌ ಅಧಿಕಾರಿ ಡಿಜಿ ಪ್ರವೀಣ್‌ ಸೂದ್‌ ಮತ್ತು ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅವರನ್ನು ಭೇಟಿ ಮಾಡಿ ಬುಧವಾರ ಇಲಾಖಾ ಪ್ರಕ್ರಿಯೆಗಳನ್ನು ಮುಗಿಸಲಿದ್ದಾರೆ. ಬಳಿಕ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಹುಟ್ಟೂರಿಗೆ ಆಗಮಿಸಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Join Whatsapp
Exit mobile version