ಬೆಳ್ತಂಗಡಿ | ಕೊರಗಜ್ಜ ಗುಡಿಗೆ ಬೆಂಕಿ ಹಚ್ಚಿದ ಪ್ರಕರಣ: ಹರೀಶ್ ಪೂಜಾರಿ ಬಂಧನ

Prasthutha|

ಬೆಳ್ತಂಗಡಿ: ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -


ಬಂಧಿತ ಆರೋಪಿಯನ್ನು ಹರೀಶ್ ಪೂಜಾರಿ ಎಂದು ಗುರುತಿಸಲಾಗಿದೆ.

ಬಜಿರೆ ಗ್ರಾಮದ ಕೊರಗಕಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಉಂಟು ಮಾಡಿದ ಆರೋಪದಲ್ಲಿ ವೇಣೂರು ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ.