Home ಕರಾವಳಿ ಬೆಳ್ತಂಗಡಿ | ಕೊರಗಜ್ಜ ಗುಡಿಗೆ ಬೆಂಕಿ ಹಚ್ಚಿದ ಪ್ರಕರಣ: ಹರೀಶ್ ಪೂಜಾರಿ ಬಂಧನ

ಬೆಳ್ತಂಗಡಿ | ಕೊರಗಜ್ಜ ಗುಡಿಗೆ ಬೆಂಕಿ ಹಚ್ಚಿದ ಪ್ರಕರಣ: ಹರೀಶ್ ಪೂಜಾರಿ ಬಂಧನ

ಬೆಳ್ತಂಗಡಿ: ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿಯನ್ನು ಹರೀಶ್ ಪೂಜಾರಿ ಎಂದು ಗುರುತಿಸಲಾಗಿದೆ.

ಬಜಿರೆ ಗ್ರಾಮದ ಕೊರಗಕಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಉಂಟು ಮಾಡಿದ ಆರೋಪದಲ್ಲಿ ವೇಣೂರು ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ.

Join Whatsapp
Exit mobile version