ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಹರೀಶ್ ಪೂಂಜಾ: ಇದು ಬಿಜೆಪಿಯ ಅಸಲಿ ಸಂಸ್ಕೃತಿ ಎಂದ ಕಾಂಗ್ರೆಸ್

Prasthutha|

ಬೆಳ್ತಂಗಡಿ: ಕಳೆಂಜ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ಮನೆ ಅರಣ್ಯ ಜಾಗದಲ್ಲಿದೆ ಎಂಬ ಕಾರಣಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಇಂದು ಬೆಳಗ್ಗೆ ಅದನ್ನು ತೆರವುಗೊಳಿಸಲು ಮುಂದಾಗಿದ್ದಾರೆ. ವಿಷಯ ತಿಳಿದು ಆಗಮಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಅರಣ್ಯಾಧಿಕಾರಿ ವಿರುದ್ಧ ಏಕವಚನದಲ್ಲಿ ಮತ್ತು ಅವಾಚ್ಯವಾಗಿ ಬೈದಿದ್ದಾರೆ.

- Advertisement -


ಮನೆ ತೆರವಿಗೆ ಮುಂದಾದ ಅರಣ್ಯ ಇಲಾಖೆ ಅಧಿಕಾರಿಗೆ ಶಾಸಕ ಹರೀಶ್ ಪೂಂಜಾ ಅವಾಚ್ಯ ಶಬ್ದಗಳಿಂದ ನಿಂದಿಸಿದ ವೀಡಿಯೊವನ್ನು ಕಾಂಗ್ರೆಸ್ ಹಂಚಿಕೊಂಡಿದೆ.


”ಸಂಸ್ಕೃತಿ, ಸಂಪ್ರದಾಯ, ಪರಂಪರೆ ಎಂದು ದೊಡ್ಡ ದೊಡ್ಡ ಪದಗಳನ್ನು ಬಳಸುವ ಬಿಜೆಪಿಯ ಅಸಲಿ ಸಂಸ್ಕೃತಿ ಅವಾಚ್ಯ ಶಬ್ದಗಳನ್ನು ಬಳಸುತ್ತಾ, ಅಸಭ್ಯವಾಗಿ ನಡೆದುಕೊಳ್ಳುವುದು” ಎಂದು ಕಾಂಗ್ರೆಸ್ ಕಿಡಿಕಾರಿದೆ.

- Advertisement -


”ಶಾಸಕನಾದವನಿಗೆ ಯಾವುದೇ ಸಮಸ್ಯೆಗಳಿಗೆ ಕಾನೂನಾತ್ಮಕ, ಸಂವಿಧಾನಾತ್ಮಕವಾಗಿ ಪರಿಹಾರ ಕಂಡುಕೊಳ್ಳಲು ಅವಕಾಶವೂ ಇದೆ, ಅಧಿಕಾರವೂ ಇದೆ, ಆದರೆ ಪುಡಿ ರೌಡಿಗಳಂತೆ ಹೈಡ್ರಾಮ ಮಾಡುವುದು ಬಿಜೆಪಿಯವರ ರಕ್ತದಲ್ಲೇ ಬಂದಿರುವ ಗುಣ ಎನಿಸುತ್ತಿದೆ” ಎಂದು ಕಾಂಗ್ರೆಸ್ ಟೀಕೆ ಮಾಡಿದೆ.

Join Whatsapp