ಶ್ರೀಲಂಕಾ ವಿರುದ್ಧದ ಸರಣಿ ಕ್ಲೀನ್‌ ಸ್ವೀಪ್‌ ಮಾಡಿದ ಭಾರತ

Prasthutha|

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲೂ ಗೆಲುವು ದಾಖಲಿಸಿರುವ ಭಾರತ, ಸರಣಿಯಲ್ಲಿ ಕ್ಲೀನ್‌ ಸ್ವೀಪ್‌ ಸಾಧನೆ ಮಾಡಿದೆ. ಹರ್ಮನ್‌ಪ್ರೀತ್‌ ಕೌರ್‌ ಮತ್ತು ರಾಜೇಶ್ವರಿ ಗಾಯಕ್ವಾಡ್‌ ಅವರ ಅತ್ಯುತ್ತಮ ಪ್ರದರ್ಶನದ ಬಲದಿಂದ ಭಾರತ 39 ರನ್‌ಗಳಿಂದ ಗೆಲುವು ಪಡೆದಿದೆ.

- Advertisement -

ಪಲ್ಲೆಕೆಲೆ ಮೈದಾನದಲ್ಲಿ ನಡೆದ ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್‌ ಮಾಡಿದ್ದ ಭಾರತದ ವನಿತೆಯರು 9 ವಿಕೆಟ್‌ ನಷ್ಟದಲ್ಲಿ 255 ರನ್‌ ಗಳಿಸಿದ್ದರು.  ನಾಯಕಿ ಹರ್ಮನ್‌ ಪ್ರೀತ್‌ ಕೌರ್‌ 75 ರನ್‌ಗಳಿಸಿದರೆ, ಪೂಜಾ ವಸ್ತ್ರಾಕರ್‌ 56 ರನ್‌ಗಳಿಸಿ ಅಜೇಯರಾಗುಳಿದರು. ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಕೇವಲ 1 ರನ್‌ನಿಂದ ಅರ್ಧಶತಕ ವಂಚಿತರಾದರು. ಲಂಕಾ ಪರ ಬೌಲಿಂಗ್‌ನಲ್ಲಿ ಚಮರಿ ಅಟ್ಟಪಟ್ಟು, ರಶ್ಮಿ ಸಿಲ್ವಾ ಹಾಗೂ ಇನೊಕಾ ರಣವೀರ ತಲಾ ಎರಡು ವಿಕೆಟ್‌ ಪಡೆದರು.

ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಅತಿಥೇಯ ಲಂಕಾ ತಂಡ 216 ರನ್‌ಗಳಿಸುವಷ್ಟರಲ್ಲೇ ಆಲೌಟ್‌ ಆಯಿತು. ಭಾರತದ ಪರ ಬೌಲಿಂಗ್‌ನಲ್ಲಿ ರಾಜೇಶ್ವರಿ ಗಾಯಕ್ವಾಡ್‌ ಮೂರು ವಿಕೆಟ್‌ ಪಡೆದರೆ, ಮೇಘನಾ ಸಿಂಗ್‌ ಮತ್ತು ಪೂಜಾ ವಸ್ತ್ರಾಕರ್‌ ತಲಾ ಎರಡು ವಿಕೆಟ್‌ ಪಡೆದರು. ಹರ್ಮನ್‌ಪ್ರೀತ್‌ ಕೌರ್ ಪಂದ್ಯ ಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು. ಏಕದಿನ ಸರಣಿಗೂ ಮುನ್ನ ನಡೆದ ಟಿ20 ಸರಣಿಯನ್ನೂ ಭಾರತ 2-1 ಅಂತರದಲ್ಲಿ ವಶಪಡಿಸಿಕೊಂಡಿತ್ತು.

Join Whatsapp