ನವದೆಹಲಿ: ಹರಿಯಾಣದ ಅಂಬಾಲದಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ನಾಯಕ ಹರ್ಬಿಲಾಸ್ ಸಿಂಗ್ ರಜ್ಜುಮಜ್ರಾನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹರ್ಬಿಲಾಸ್ ಸಿಂಗ್ ಅವರು ಸ್ನೇಹಿತರಾದ ಪುನೀತ್, ಗುಗಲ್ ಅವರೊಂದಿಗೆ ಕಾರಿನಲ್ಲಿ ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಪುನೀತ್‌ಗೂ ಗುಂಡು ತಗುಲಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹರ್ಬಿಲಾಸ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಪುನೀತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ಅಂಬಾಲ ಪೊಲೀಸ್ ವರಿಷ್ಠಾಧಿಕಾರಿ ಎಸ್. ಎಸ್. ಭೋರಿಯಾ ತಿಳಿಸಿದ್ದಾರೆ.