ಹೊಸದಿಲ್ಲಿ: ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ 10 ವರ್ಷಗಳಿಂದ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಅವರು ಬಿಡುಗಡೆಗೊಂಡಿದ್ದಾರೆ.
1999-2000 ರಲ್ಲಿ ಹರಿಯಾಣದಲ್ಲಿ 3,206 ಮೂಲ ಶಿಕ್ಷಕರನ್ನು ಕಾನೂನುಬಾಹಿರವಾಗಿ ನೇಮಕ ಮಾಡಿದ್ದಕ್ಕಾಗಿ ಚೌಟಾಲಾ ಮತ್ತು ಅವರ ಮಗನನ್ನು ದೆಹಲಿಯ ನ್ಯಾಯಾಲಯವು 2011 ಜನವರಿ 13 ರಂದು ದೋಷಿ ಎಂದು ಘೋಷಿಸಿತ್ತು. ಶಿಕ್ಷಕರನ್ನು ನೇಮಿಸಿಕೊಳ್ಳಲು ಚೌಟಾಲಾ ಲಂಚ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿ ಐಎಎಸ್ ಅಧಿಕಾರಿ ಸಂಜೀವ್ ಕುಮಾರ್ ಅವರ ದೂರಿನ ಮೇರೆಗೆ ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.
ಈಗಾಗಲೇ ಪರೋಲ್ ಮೇಲೆ ಹೊರಗಿದ್ದ ಓಂ ಪ್ರಕಾಶ್ ಚೌಟಾಲಾ ಅವರು ಔಪಚಾರಿಕತೆಗಳನ್ನು ಪೂರ್ಣಗೊಳಿಸಲು ಶುಕ್ರವಾರ ತಿಹಾರ್ ಜೈಲಿಗೆ ತಲುಪಿ ನಂತರ ಅವರು ಬಿಡುಗಡೆಗೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.