ಯೇಸು ಕ್ರಿಸ್ತನ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು

Prasthutha: December 26, 2021

ಚಂಡೀಗಢ: 173 ವರ್ಷದ ಹಳೆಯ ಚರ್ಚ್‌ ಆವರಣದಲ್ಲಿದ್ದ ಯೇಸು ಕ್ರಿಸ್ತನ ಪ್ರತಿಮೆಯನ್ನು ದುಷ್ಕರ್ಮಿಗಳಿಬ್ಬರು ಧ್ವಂಸಗೊಳಿಸಿರುವ ಘಟನೆ ಹರಿಯಾಣ ರಾಜ್ಯದ ಅಂಬಾಲಾದಲ್ಲಿ ನಡೆದಿದೆ.

ಚರ್ಚ್ ನ ಕಾಂಪೌಂಡ್ ಹಾರಿ ಒಳ ನುಗ್ಗಿರುವ ಇಬ್ಬರು ದುಷ್ಕರ್ಮಿಗಳು ಪ್ರತಿಮೆ ಹಾನಿ ಮಾಡಿರುವುದು ಸಿಸಿ ಕ್ಯಾಮರದಲ್ಲಿ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸದರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ನರೇಶ್, ಇಬ್ಬರು ವ್ಯಕ್ತಿಗಳು ಚರ್ಚ್ ನ ಕಾಂಪೌಂಡ್ ಗೋಡೆಯನ್ನು ಹಾರಿ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸಗೊಳಿಸಿದರು. ಆರೋಪಿಗಳನ್ನು ಇನ್ನೂ ಗುರುತಿಸಲಾಗಿಲ್ಲ, ಅದರ ತನಿಖೆಗಾಗಿ ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ. ದೂರು ದಾಖಲಾಗಿದ್ದು, ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!