Home ಟಾಪ್ ಸುದ್ದಿಗಳು ಹರ್ಯಾಣ: ವೈದ್ಯಕೀಯ ವಿದ್ಯಾರ್ಥಿನಿಯನ್ನು ಅಪಹರಿಸಿ ಹಲ್ಲೆ ನಡೆಸಿದ ವೈದ್ಯ

ಹರ್ಯಾಣ: ವೈದ್ಯಕೀಯ ವಿದ್ಯಾರ್ಥಿನಿಯನ್ನು ಅಪಹರಿಸಿ ಹಲ್ಲೆ ನಡೆಸಿದ ವೈದ್ಯ

ರೋಹ್ಟಕ್: ಕೋಲ್ಕತ್ತಾ ವೈದ್ಯಕೀಯ ಕಾಲೇಜಿನಲ್ಲಿ ತರಬೇತಿ ನಿರತ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಹರ್ಯಾಣದ ರೋಹ್ಟಕ್ ನಲ್ಲಿ ವೈದ್ಯಕೀಯ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.


ವೈದ್ಯರೊಬ್ಬರು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ತಕ್ಷಣವೇ ಕ್ರಮ ಕೈಗೊಂಡಿದ್ದು ಆರೋಪಿಯನ್ನು ಬಂಧಿಸಿ ವಿಚಾರಣೆ ಆರಂಭಿಸಿದ್ದಾರೆ.


ಪಿಜಿಐಎಂಎಸ್ ಬಿಡಿಎಸ್ ವಿದ್ಯಾರ್ಥಿ ನಿನ್ನೆ ರಾತ್ರಿ ಹಲ್ಲೆ ನಡೆದಿರುವ ಬಗ್ಗೆ ದೂರು ನೀಡಿದ್ದಾರೆ. ತಕ್ಷಣ ಪೊಲೀಸ್ ತಂಡ ಆಸ್ಪತ್ರೆಗೆ ತಲುಪಿದ್ದಾರೆ. ಕೌನ್ಸೆಲಿಂಗ್ ಜತೆಗೆ ವಿದ್ಯಾರ್ಥಿಯ ಕುಟುಂಬ ಮತ್ತು ವಕೀಲರ ಸಮ್ಮುಖದಲ್ಲಿ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಾಯಿತು. ಸಂತ್ರಸ್ತೆಯ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಿಕೊಳ್ಳಲಾಗಿದೆ. ಆಗಸ್ಟ್ 16ರಂದು ಆರೋಪಿ ವಿದ್ಯಾರ್ಥಿನಿಯನ್ನು ಅಪಹರಿಸಿ ಚಂಡೀಗಢಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದ ಎಂದು ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿನಿ ಹಾಗೂ ಆರೋಪಿ ಇಬ್ಬರೂ ಪಿಜಿಐಎಂಎಸ್ ಗೆ ಸೇರಿದವರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Join Whatsapp
Exit mobile version