ಕಾಂಗ್ರೆಸ್’ನತ್ತ ಮುಖ ಮಾಡಿದ್ರಾ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ?

Prasthutha|

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಗೆ ಹೋಗಿರುವ ಶಾಸಕರಿಗೆ ಕಾಂಗ್ರೆಸ್ ಗಾಳ ಹಾಕಿದೆ ಎಂದು ತಿಳಿದು ಬಂದಿದ್ದು, ಈ ಗಾಳದಲ್ಲಿ ಯಶವಂತಪುರ ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಬಿದ್ದಿದ್ದಾರೆ ಎನ್ನುವ ಸುದ್ದಿ ಹಬ್ಬಿದೆ.

- Advertisement -

ಬೆಂಗಳೂರಿನ ಹೇರೋಹಳ್ಳಿಯಲ್ಲಿರುವ ಎಸ್. ಟಿ. ಸೋಮಶೇಖರ್ ಕಚೇರಿಗೆ ಭೇಟಿ ನೆಲಮಂಗಲ ಶಾಸಕ ಎನ್. ಶ್ರೀನಿವಾಸ್ ಭೇಟಿ ನೀಡಿದ್ದು, ಆಪರೇಷನ್ ಹಸ್ತಕ್ಕೆ ಮತ್ತಷ್ಟು ಪುಷ್ಠಿ ನೀಡಿದಂತಿದೆ.

ಅಲ್ಲದೇ ಇದು ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವ ಸಿಟಿ ರವಿ ಎಸ್ ಟಿ ಸೋಮಶೇಖರ್ ಗೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಸೋಮಶೇಖರ್, ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಳಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ. ನನಗೆ ರಾಜ್ಯ ನಾಯಕರ ಮೇಲೆ ಯಾವುದೇ ಬೇಸರ ಇಲ್ಲ, ವಿಷಾದ ಇಲ್ಲ. ಆದ್ರೆ, ಕ್ಷೇತ್ರದಲ್ಲಿ ಚುನಾವಣೆಯಲ್ಲಿ ನನ್ನ ವಿರುದ್ದವೇ ಚಟುವಟಿಕೆ ನಡೆಸಿದವರ ವಿರುದ್ಧ ಇನ್ನೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದರೆ ಹೇಗೆ? ನೀವು ಯಾವಾಗ ಸಿಗುತ್ತೀರಾ ಹೇಳಿ ನಾನು ಬಂದು ನಿಮ್ಮನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ ಎಂದಿದ್ದಾರೆ ಎನ್ನಲಾಗಿದೆ.

Join Whatsapp