ನೈತಿಕ ಪೊಲೀಸ್ ಗಿರಿ ಸಮರ್ಥಿಸಿದ ಬೊಮ್ಮಾಯಿ ರಾಜೀನಾಮೆಯ ಹ್ಯಾಷ್ ಟ್ಯಾಗ್ ಟ್ರೆಂಡಿಂಗ್

Prasthutha|

ಬೆಂಗಳೂರು: ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿ ಬುಧವಾರ ನೀಡಿದ್ದ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಬೊಮ್ಮಾಯಿ ಅವರ ರಾಜೀನಾಮಗೆ ಒತ್ತಾಯಿಸಿದ ಹ್ಯಾಷ್ ಟ್ಯಾಗ್ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗಿದೆ.

- Advertisement -

#ResignKarnatakaCM ಮತ್ತು #CMSupportsMoralPolicing ಎಂಬ ಎರಡು ಹ್ಯಾಷ್ ಟ್ಯಾಗ್ ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ಆಗಿದೆ.

ಬೊಮ್ಮಾಯಿ ಅವರ ಹೇಳಿಕೆಗೆ ಕಾಂಗ್ರೆಸ್ ಸೇರಿದಂತೆ ಹಲವು ರಾಜಕೀಯ ಪಕ್ಷಗಳು, ಮುಖಂಡರು, ಸಾಮಾಜಿಕ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಬಸವರಾಜ ಬೊಮ್ಮಾಯಿ ಬುಧವಾರ ಬೆಳಗ್ಗೆ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿಯ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ, ಸಮಾಜದಲ್ಲಿ ನಾವೆಲ್ಲರೂ ಜವಾಬ್ದಾರಿ ಹೊಂದಬೇಕಾಗುತ್ತದೆ. ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಈ ಭಾವನೆಗಳಿಗೆ ಧಕ್ಕೆ ಆಗದ ಹಾಗೇ ನಾವು ನಡೆದುಕೊಳ್ಳಬೇಕಾಗುತ್ತದೆ. ಆ ಭಾವನೆಗಳಿಗೆ ಧಕ್ಕೆ ಬಂದಾಗ ಸಹಜವಾಗಿ ಆಕ್ಷನ್ ಆ್ಯಂಡ್ ರಿಯಾಕ್ಷನ್ ಆಗುತ್ತದೆ ಎಂದು ಹೇಳುವ ಮೂಲಕ ನೈತಿಕ ಪೊಲೀಸ್ ಗಿರಿಯನ್ನು ಅವರು ಸಮರ್ಥಿಸಿಕೊಂಡಿದ್ದರು.



Join Whatsapp