ಹಾಸನ: ಹೊಯ್ಸಳ ವಾಸ್ತು ಶಿಲ್ಪಕ್ಕೆ ಮನಸೋತ ರಾಜ್ಯಪಾಲರು

Prasthutha|

ಹಾಸನ:  ಹೊಯ್ಸಳ ಅರಸರ ರಾಜಕೀಯ ಕಾರ್ಯಕ್ಷೇತ್ರವಾಗಿದ್ದ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೆಬೀಡು ದೇವಾಲಯಗಳಿಗೆ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ಭೇಟಿ ನೀಡಿದರು.

- Advertisement -

ಐತಿಹಾಸಿಕ ವಿಶೇಷತೆಯ ಹೊಯ್ಸಳ ವಾಸ್ತು ಶಿಲ್ಪ ಶೈಲಿಯ ಕಂಡು ವಿಸ್ಮಿತರಾದರು. ಗೈಡ್ ಅಸ್ಲಮ್ ಷರಿಫ್ ಅವರು ಬೇಲೂರು, ಹಳೇಬೀಡು ಶಿಲ್ಪ ಶೈಲಿ ಕುರಿತು ರಾಜ್ಯಪಾಲರಿಗೆ ವಿವರಿಸಿದರು. ನಂತರ ಚೇನ್ನಕೇಶವ ಹಾಗೂ ಹೊಯ್ಸಳೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯಗಳ ಅರ್ಚಕರು ರಾಜ್ಯಪಾಲರನ್ನು ಸನ್ಮಾನಿಸಿದರು.

ಶಾಸಕ ಲಿಂಗೇಶ್, ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಆರ್.  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾಂತರಾಜು, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಎನ್ ನಂದಿನಿ, ಸಕಲೇಶಪುರ ಉಪ ವಿಭಾಗಾಧಿಕಾರಿ ಪ್ರತೀಕ್ ಭಾಯಲ್, ತಹಸೀಲ್ದಾರ್ ಮೋಹನ್, ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ರವಿಕುಮಾರ್, ಚೆನ್ನಕೇಶವ ದೇವಾಲಯದ ಆಡಳಿತ ಅಧಿಕಾರಿ ವಿಧ್ಯುಲ್ಲತಾ, ಚನ್ನಕೇಶವ ದೇವಾಲಯದ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷರಾದ ಡಾ. ನಾರಾಯಣಸ್ವಾಮಿ ಸೇರಿದಂತೆ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



Join Whatsapp