ಹಾಸನ: ಭಾರೀ ಮಳೆ ಹಿನ್ನೆಲೆ; ಇಂದು 3 ತಾಲೂಕುಗಳ ಶಾಲೆಗಳಿಗೆ ರಜೆ

Prasthutha|

ಹಾಸನ: ಜಿಲ್ಲೆಯಲ್ಲಿ ಅದರಲ್ಲೂ ಮಲೆನಾಡು ಭಾಗದಲ್ಲಿ ಮಳೆ ಜೋರಾಗಿರುವುದರಿಂದ ಮೂರು ತಾಲೂಕುಗಳ ಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೊಷಿಸಲಾಗಿದೆ.

- Advertisement -

ಆಲೂರು, ಅರಕಲಗೂಡು ಮತ್ತು ಸಕಲೇಶಪುರ ತಾಲ್ಲೂಕಿನ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶ ಹೊರಡಿಸಿದ್ದಾರೆ. ಕಾಲೇಜು ತರಗತಿ ಎಂದಿನಂತೆ ನಡೆಯಲಿವೆ.

ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹಾಸನ ನಗರ ವ್ಯಾಪ್ತಿಯಲ್ಲಿ ಕೊಂಚ ಬಿಡುವು ನೀಡಿ, ನಂತರ ಜೋರು ಮಳೆಯಾಗುತ್ತಿದೆ. ಇದರಿಂದ ಜನ ಜೀವನ ಪರದಾಡುವಂತಾಗಿದೆ. ಉಳಿದಂತೆ ಉಳಿದ ಕಡೆಗಳಲ್ಲಿ ವರ್ಷಧಾರೆ ಜೋರಾಗಿದೆ. ಅದರಲ್ಲೂ ಆಲೂರು, ಸಕಲೇಶಪುರ, ಬೇಲೂರು, ಅರಕಲಗೂಡು ಮೊದಲಾದ ಕಡೆಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ.

- Advertisement -

ಎಡೆ ಬಿಡದೆ ಸುರಿಯುತ್ತಿರುವ ಮಳೆಯಿಂದ ಶಾಲಾ ಮಕ್ಕಳಿಗೆ ಅನಾನುಕೂಲವಾದ ಹಿನ್ನೆಲೆಯಲ್ಲಿ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಳೆ ಪರಿಸ್ಥಿತಿ ಗಮನಿಸಿ ಮತ್ತೆ ರಜೆ ವಿಸ್ತರಣೆ ಮಾಡುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಡಿಸಿ ತಿಳಿಸಿದ್ದಾರೆ.

Join Whatsapp